Bhagwant Mann: ಎಎಪಿ ಸಿಎಂ ಅಭ್ಯರ್ಥಿ ಭಗವಂತ್‌ 58,206 ಅಂತರದಲ್ಲಿ ಭರ್ಜರಿ ಗೆಲುವು

ಚಂಡೀಗಢ, ಮಾರ್ಚ್ 10: ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಭರ್ಜರಿಯಾಗಿ ಮುನ್ನಡೆ ಸಾಧಿಸಿದೆ. ಈಗಾಗಲೇ ಎಎಪಿ ಮೂವತ್ತು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಪಂಜಾಬ್‌ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್‌ ಮಾನ್‌ ಕೂಡಾ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪಂಜಾಬ್‌ ಎಎಪಿ ಅಭ್ಯರ್ಥಿ ಭಗವಂತ್‌ ಮಾನ್‌ 58,206 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್‌ ಮಾನ್‌ ತಾನು ಭಗತ್ ಸಿಂಗ್ ಅವರ ಗ್ರಾಮ ಖಟ್ಕರಕಲನ್ ನಲ್ಲಿಯೇ ಪ್ರಮಾಣ ವಚನ ಸ್ವೀಕಾರ ಮಾಡುವುದಾಗಿ ಹೇಳಿದ್ದಾರೆ.

"ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದು ಭಗತ್ ಸಿಂಗ್ ಅವರ ಗ್ರಾಮ ಖಟ್ಕರಕಲನ್ ನಲ್ಲಿಯೇ ಹೊರತು ರಾಜಭವನದಲ್ಲಿ ಅಲ್ಲ," ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ. "ಯಾವುದೇ ಸರ್ಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ. ಭಗತ್ ಸಿಂಗ್ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳು ಇರುತ್ತವೆ," ಎಂದು ಕೂಡಾ ತಿಳಿಸಿದ್ದಾರೆ.

Punjab Election Results 2022: AAP CM candidate Bhagwant Mann wins

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+