ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Amarinder Singh: ಪಟಿಯಾಲದಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಹೀನಾಯ ಸೋಲು

|
Google Oneindia Kannada News

ಚಂಡೀಗಢ, ಮಾರ್ಚ್ 10: ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೀನಾಯವಾಗಿ ಸೋಲು ಕಂಡಿದ್ದಾರೆ. ತನ್ನದೇ ಆದ ಪಕ್ಷವನ್ನು ಕಟ್ಟಿ ಪಟಿಯಾಲದಲ್ಲಿ ಸ್ಪರ್ಧೆಗೆ ಇಳಿದಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಲುಂಡಿದ್ದಾರೆ.

ಪಂಜಾಬ್‌ನಲ್ಲಿ ಕಾಂಗ್ರೆಸ್‌ನಿಂದ ಹೊರ ಬಂದು ತನ್ನದೇ ಆದ ಪಂಜಾಜ್ ಲೋಕ ಕಾಂಗ್ರೆಸ್‌ ಪಕ್ಷವನ್ನು ಸ್ಥಾಪನೆ ಮಾಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿದಿದ್ದರು. ಆದರೆ ಈಗ ಸೋಲು ಕಂಡಿದ್ದಾರೆ.

Breaking: ರಾಜೀನಾಮೆ ನೀಡಲು ಸಜ್ಜಾದ ಸಿಎಂ ಚರಣ್ ಜೀತ್ ಸಿಂಗ್ ಚನ್ನಿBreaking: ರಾಜೀನಾಮೆ ನೀಡಲು ಸಜ್ಜಾದ ಸಿಎಂ ಚರಣ್ ಜೀತ್ ಸಿಂಗ್ ಚನ್ನಿ

ಬಿಜೆಪಿ 65 ಸ್ಥಾನಗಳಲ್ಲಿ, ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮತ್ತು ಎಸ್‌ಎಡಿ-ಸಂಯುಕ್ತ್ 15 ಸ್ಥಾನಗಳಲ್ಲಿ ಚುನಾವಣೆ ಎದುರಿಸಿತ್ತು. ಈ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಂಜಾಬ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಆಗಿದ್ದರು.

Punjab Election Results 2022: Former Punjab CM Capt Amarinder Singh loses from Patiala

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59. (ಒನ್‌ಇಂಡಿಯಾ ಸುದ್ದಿ)

English summary
Punjab Election Results 2022: Former Punjab CM Capt Amarinder Singh loses from Patiala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X