ಪಂಜಾಬ್: ಫೆ.6 ರಂದು ಕಾಂಗ್ರೆಸ್‌ನಿಂದ ಸಿಎಂ ಅಭ್ಯರ್ಥಿ ಘೋಷಣೆ
ಚಂಡೀಗಢ, ಫೆಬ್ರವರಿ 3: ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಯಾರೆಂದು ಫೆ.6ರಂದು ಘೋಷಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಫೆಬ್ರವರಿ 6 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್‌ಗೆ ಆಗಮಿಸುತ್ತಿದ್ದು, ಅಂದೇ ಸಿಎಂ ಅಭ್ಯರ್ಥಿಯ ಹೆಸರನ್ನೂ ಘೋಷಿಸಬಹುದು ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹಾಗೂ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಲ್ಲಿ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಇತ್ತೀಚೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಶೀಘ್ರದಲ್ಲೇ ಘೋಷಣೆ ಮಾಡಲಿದ್ದೇವೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದರು. ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜತೆಗೆ ಸಮಾಲೋಚನೆ ನಡೆಸಿದ್ದಾರೆ.
ಪಕ್ಷವು ತನ್ನ ಶಕ್ತಿ ಅಪ್ಲಿಕೇಷನ್ ಮೂಲಕ ನಾಯಕರು ಹಾಗೂ ಕಾರ್ಯಕರ್ತರಿಂದ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಹಲವು ವಾರಗಳಲ್ಲಿ ಚನ್ನಿ ಮತ್ತು ಸಿದ್ದು ಇಬ್ಬರೂ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳಲು ಪರೋಕ್ಷವಾಗಿ ಅಥವಾ ನೇರವಾಗಿ ಪ್ರಯತ್ನಿಸಿದ್ದಾರೆ.
ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಚನ್ನಿ ಅವರ ಹಿಂದೆ ಕಾಂಗ್ರೆಸ್ ತನ್ನ ಬಲವನ್ನು ಹಾಕುತ್ತಿದೆ.
ಎಸ್‌ಸಿಗಳು ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಬ್ಯಾಂಕ್ ಆಗಿದ್ದವು, ಆದರೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಇತರ ಕೆಲವು ಸಣ್ಣ ಪಕ್ಷಗಳು ಮುನ್ನಲೆಗೆ ಬಂದ ನಂತರ ಈ ಮತಬ್ಯಾಂಕ್ ಕಾಂಗ್ರೆಸ್‌ನಿಂದ ದೂರ ಸರಿದಿತ್ತು.
ಚನ್ನಿಯನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಕಾಂಗ್ರೆಸ್ ಪಂಜಾಬ್‌ನ ಮೂರನೇ ಒಂದು ಭಾಗದಷ್ಟು ಜನಸಂಖ್ಯೆಯನ್ನು ಹೊಂದಿರುವ ಎಸ್‌ಸಿ ಸಮುದಾಯದ ಮತ ಬ್ಯಾಂಕ್ ಅನ್ನು ಕ್ರೋಢೀಕರಿಸಲು ಪ್ರಯತ್ನಿಸುತ್ತಿದೆ.
ಜನವರಿ 27 ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಪಕ್ಷವು ಸಿಎಂ ಅಭ್ಯರ್ಥಿಯ ಘೋಷಣೆ ಮಾಡಿ ಚುನಾವಣೆಯನ್ನು ಎದುರಿಸಲಿದೆ, ಇದನ್ನು ಪಕ್ಷದ ಕಾರ್ಯಕರ್ತರನ್ನು ಸಂಪರ್ಕಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಖಚಿತಪಡಿಸಿದ್ದರು.
ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಿದರೂ ಒಬ್ಬರು ಇನ್ನೊಬ್ಬರು ಬೆಂಬಲಿಸುತ್ತಾರೆ ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ಅಂದು ಹೇಳಿದ್ದರು. ಅಂದಿನ ರ್‍ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರು ಪಕ್ಷವು ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಒತ್ತಾಯಿಸಿದ್ದು, ತಾನು 'ಶೋಪೀಸ್' ಆಗಲು ಬಯಸುವುದಿಲ್ಲ ಎಂದು ಹೆಳಿದ್ದರು. ಇದರ ಇದರ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಈ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ. ಪಕ್ಷವು ತನ್ನ ಶಕ್ತಿ ಆ್ಯಪ್ ಮೂಲಕ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಂದ ಪ್ರತಿಕ್ರಿಯೆಗಳನ್ನು ಪಡೆಯುತ್ತಿದೆ. ಈ ಬಗ್ಗೆ ಸಾಮಾನ್ಯ ಜನರ ಅಭಿಪ್ರಾಯವನ್ನೂ ಪಕ್ಷ ಕೇಳಿದೆ.












Click it and Unblock the Notifications