ಪಂಜಾಬ್‌ನಲ್ಲಿ ಲಾಕ್‌ಡೌನ್‌ ಸಡಿಲಿಕೆ, 2 ವಾರ ಕರ್ಫ್ಯೂ ಮುಂದುವರಿಕೆ

ಚಂಡಿಗಢ, ಏಪ್ರಿಲ್ 29: ಮೇ 3ರ ಬಳಿಕ ದೇಶದಲ್ಲಿ ಲಾಕ್‌ಡೌನ್‌ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ಆದರೆ, ಗ್ರೀನ್‌ ಜೋನ್ ಪ್ರದೇಶಗಳಲ್ಲಿ ಕೈಗಾರಿಕೆ ಉದ್ಯಮಗಳಿಗೆ ಹಾಗೂ ಇನ್ನಿತರ ಕಾರ್ಮಿಕರಿಗೆ ವಿನಾಯಿತಿ ನೀಡುವ ಸಾಧ್ಯತೆ ಇದೆ.

ಈಗಾಗಲೇ ಕರ್ನಾಟಕ, ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳೂ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಘೋಷಿಸಿದೆ. ಇದೀಗ, ಪಂಜಾಬ್‌ ಕೂಡ ಲಾಕ್‌ಡೌನ್‌ನಿಂದ ಸಾರ್ವಜನಿಕರಿಗೆ ವಿನಾಯಿತಿ ನೀಡಿದೆ.

ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೂ ಲಾಕ್‌ಡೌನ್‌ ವಿನಾಯಿತಿ ನೀಡಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ. ಈ ವೇಳೆಯಲ್ಲಿ ಅಂಗಡಿಗಳು ತೆರೆದಿರುತ್ತೆ, ಸಾರ್ವಜನಿಕರು ಮನೆಯಿಂದ ಹೊರಬಂದು ತಮಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದು ಎಂದು ತಿಳಿಸಿದ್ದಾರೆ.

Lockdown Lifted From 7 Am To 11 Am Everyday In Punjab

ರಾಜ್ಯದಲ್ಲಿ ಹೇರಲಾಗಿರುವ ಕರ್ಫ್ಯೂ ಇನ್ನು ಎರಡು ವಾರಗಳು ಮುಂದುವರಿಯಲಿದೆ ಎಂದು ಆದೇಶಿಸಿದ್ದಾರೆ. ಅಂದ್ರೆ, ಮೇ 3ರ ಬಳಿಕವೂ ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ. ಹಾಗಾಗಿ, ಜನರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಕೆಲವು ವಿನಾಯಿತಿ ಘೋಷಣೆ ಮಾಡಲಾಗಿದೆ.

ಇನ್ನುಳಿದಂತೆ ಪ್ರಧಾನಿ ನರೇಂದ್ರ ಮೋದಿ ಈ ವಾರದಲ್ಲಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೇ 3ರ ನಂತರ ದೇಶದಲ್ಲಿ ಯಾವ ರೀತಿ ವ್ಯವಸ್ಥೆ ಜಾರಿಯಾಗುತ್ತೆ ಎಂದು ಅಧಿಕೃತವಾಗಿ ತಿಳಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+