ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೃದಯಾಘಾತ: ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ಸಾವು

|
Google Oneindia Kannada News

ಚಂಡೀಘರ್, ಫೆಬ್ರವರಿ.13: ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಾದಿತ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 72 ವರ್ಷದ ರೈತನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಕಳೆದ ಗುರುವಾರ ರಾತ್ರಿಯೇ ಮೋಗಾ ಜಿಲ್ಲೆಯ ನಿವಾಸಿ ಹಂಸಾ ಸಿಂಗ್ ಅವರಿಗೆ ಹೃದಯಾಘಾತವಾಗಿತ್ತು. ಶುಕ್ರವಾರ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು ಎಂದು ಹರಿಯಾಣದ ಕುಂಡ್ಲಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ನವಂಬರ್.26 ರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

Punjab Farmer Who Part Of Protests At Singhu Border Died Of Cardiac Attack

ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹ:

ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಗಡಿ ಪ್ರದೇಶದಲ್ಲಿ ಕಳೆದ 80 ದಿನಗಳಿಂದಲೂ ರೈತರು ಹೋರಾಟ ಮುಂದುವರಿಸುತ್ತಿದ್ದಾರೆ. ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
Punjab Farmer Who Part Of Protests At Singhu Border Died Of Cardiac Attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X