ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷ ತೊರೆದ ಪಂಜಾಬ್‌ನ ಕಾಂಗ್ರೆಸ್‌ ಮಾಜಿ ಮುಖ್ಯಸ್ಥ ಸುನೀಲ್ ಜಾಖರ್

|
Google Oneindia Kannada News

ಚಂಡೀಗಢ ಮೇ 14: ಪಂಜಾಬ್‌ನ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ ಇಂದು ಪಕ್ಷ ತೊರೆದಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಂದ ಕಾಂಗ್ರೆಸ್‌ನ ಎಲ್ಲಾ ಉಲ್ಲೇಖಗಳನ್ನು ತೆಗೆದುಹಾಕಿದ್ದು ಇಂದು (ಮೇ 14) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷವು ಅವರ ವಿರುದ್ಧ ಕ್ರಮ ಕೈಗೊಂಡಾಗಿನಿಂದ ಜಾಖರ್ ಕಾಂಗ್ರೆಸ್ ನಾಯಕತ್ವದ ವಿರುದ್ಧ ಸುನೀಲ್ ಜಾಖರ್ ಅಸಮಾಧಾನಗೊಂಡಿದ್ದರು. ಇದು ರಾಜೀನಾಮೆಗೆ ಕಾರಣವಾಗಿದೆ.

ಇತ್ತೀಚೆಗೆ, ಕಾಂಗ್ರೆಸ್ ಶಿಸ್ತು ಸಮಿತಿಯು ಜಾಖರ್ ಮತ್ತು ಕೆ ವಿ ಥಾಮಸ್ ಅವರನ್ನು ಪಕ್ಷದ ರೇಖೆಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಿಂದ ಎಲ್ಲಾ ಪಕ್ಷದ ಹುದ್ದೆಗಳಿಂದ ತೆಗೆದುಹಾಕಿತು. ಮೂಲಗಳ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾಖರ್ ಬಗ್ಗೆ ಮೃದುತ್ವ ತೋರಿಸಿದರು ಮತ್ತು ಸಮಿತಿಯ ಶಿಫಾರಸಿನ ಹೊರತಾಗಿಯೂ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಿಲ್ಲ.

Punjab former Congress chief Sunil Jakhar left the party

ಎಕೆ ಆಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಸಮಿತಿಯು ಈ ದೂರುಗಳ ಬಗ್ಗೆ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಅಂತಿಮ ನಿರ್ಧಾರಕ್ಕಾಗಿ ಗಾಂಧಿ ಅವರಿಗೆ ಕಳುಹಿಸಿದೆ. ಏಪ್ರಿಲ್ 11 ರಂದು ಕಾಂಗ್ರೆಸ್ ಮುಖಂಡರಾದ ಕೆವಿ ಥಾಮಸ್ ಮತ್ತು ಸುನೀಲ್ ಜಾಖರ್ ಅವರಿಗೆ ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ವಾರದೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. ಆದರೆ ಸುನೀಲ್ ಜಾಖರ್ ಅವರು ಸಮಿತಿಯ ಮುಂದೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.

Punjab former Congress chief Sunil Jakhar left the party

ಏಪ್ರಿಲ್ 11 ರಂದು ಕಾಂಗ್ರೆಸ್ ಶಿಸ್ತು ಸಮಿತಿ ನೀಡಿದ ನೋಟಿಸ್‌ಗೆ ಜಾಖರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಶಿಸ್ತು ಸಮಿತಿಯ ನೋಟಿಸ್‌ನಲ್ಲಿ, ಜಾಖರ್ ಅವರು ಕಾಂಗ್ರೆಸ್ ಪಕ್ಷದ ಗುಲಾಮರಲ್ಲ, ಶಿಸ್ತಿನ ಕಾರ್ಯಕರ್ತ ಎಂದು ಹೇಳಿದ್ದರು. ಕಾಂಗ್ರೆಸ್ ಪಕ್ಷದೊಂದಿಗೆ 50 ವರ್ಷಗಳ ಹಳೆಯ ಸಂಬಂಧವಿದೆ ಎಂದು ಹೇಳಿದ ಜಾಖರ್, ನಾನು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಶಿಸ್ತಿನ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದಿದ್ದರು. ಆದರೀಗ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ.

English summary
Punjab former Congress chief Sunil Jakhar left the party today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X