Breaking; ಕುಮಾರ್ ವಿಶ್ವಾಸ್ ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್

ಚಂಡೀಗಢ, ಮೇ 02; ಆಮ್ ಆದ್ಮಿ ಪಕ್ಷದ ಮಾಜಿ ನಾಯಕ, ಕವಿ ಕುಮಾರ್ ವಿಶ್ವಾಸ್ ಬಂಧನಕ್ಕೆ ಪಂಜಾಬ್ & ಹರ್ಯಾಣ ಹೈಕೋರ್ಟ್ ತಡೆ ನೀಡಿದೆ. ಪೊಲೀಸರು ಕುಮಾರ್ ವಿಶ್ವಾಸ್ ಹೇಳಿಕೆ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸೋಮವಾರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಕುಮಾರ್ ವಿಶ್ವಾಸ್ ಬಂಧನಕ್ಕೆ ತಡೆಕೊಟ್ಟಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ವಿರುದ್ಧ ಹೇಳಿಕೆ ನೀಡಿದ್ದ ಕುಮಾರ್ ವಿಶ್ವಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.

Punjab & Haryana High Court Stay For Arrest Of Kumar Vishwas

ಪಂಜಾಬ್ ವಿಧಾನಸಭೆ ಚುನಾವಣೆಗೂ ಮೊದಲು ಅರವಿಂದ್ ಕೇಜ್ರಿವಾಲ್ ವಿರುದ್ಧ ಕುಮಾರ್ ವಿಶ್ವಾಸ್ ಹೇಳಿಕೆಯೊಂದನ್ನು ನೀಡಿದ್ದರು. ಆಗ ಪೊಲೀಸರು ಕುಮಾರ್ ವಿಶ್ವಾಸ್ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ಸಹ ನಡೆಸಿದ್ದರು.

ಚಂಡೀಗಢದ ರೂಪನಗರ ಪಟ್ಟಣದ ಸದರ್ ಪೊಲೀಸ್ ಠಾಣೆಯಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಅರವಿಂದ್ ಕೇಜ್ರಿವಾಲ್ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಕುಮಾರ್ ವಿಶ್ವಾಸ್ ಆರೋಪ ಮಾಡಿದ್ದರು.

ಕುಮಾರ್ ವಿಶ್ವಾಸ್ ವಿರುದ್ಧ ಸೆಕ್ಷನ್ 153, 153ಎ, 323, 341, 506, 120ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸಭೆಯೊಂದರಲ್ಲಿ ಅವರು ಮಾಡಿದ್ದ ಭಾಷಣ ಆಧಾರವಾಗಿಟ್ಟುಕೊಂಡು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕುಮಾರ್ ವಿಶ್ವಾಸ್ ಮನೆಗೆ ಭೇಟಿ ನೀಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಸಹ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+