ಪಂಜಾಬ್ನಲ್ಲಿ ಭಾರತೀಯ ವಾಯುಪಡೆಯ ಮಿಗ್ 21 ಅಪಘಾತ, ಪೈಲಟ್ ಸಾವು
ಚಂಡೀಘರ್, ಮೇ 21: ಪಂಜಾಬ್ನಲ್ಲಿ ಗುರುವಾರ ತಡರಾತ್ರಿ ಭಾರತೀಯ ವಾಯುಪಡೆಯ ಮಿಗ್ 21 ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ಪೈಲಟ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಪಂಜಾಬ್ನ ಮೋಗಾ ಎಂಬಲ್ಲಿ ಈ ಘಟನೆ ನಡೆದಿದ್ದು ಭಾರತೀಯ ವಾಯುಸೇನೆ ದುರಂತದ ಬಗ್ಗೆ ಖಚಿತ ಮಾಹಿತಿ ನೀಡಿದೆ.
Recommended Video
"ಭಾರತೀಯ ವಾಯುಸೇನೆಯ ಬೀಸನ್ ಯುದ್ಧ ವಿಮಾನ ಕಳೆದ ರಾತ್ರಿ ಪಶ್ಚಿಮ ವಲಯದಲ್ಲಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಸ್ಕ್ವಾಡ್ರನ್ ಲೀಡರ್ ಅಭಿನವ್ ಚೌಧರಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಭಾರತೀಯ ವಾಯುಸೇನೆ ಸಂತಾಪ ಸೂಚಿಸುತ್ತದೆ ಹಾಗೂ ಅವರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಲಿದೆ" ಎಂದು ಭಾರತೀಯ ವಾಯುಸೇನೆ ದುರಂತದ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ದೈನಂದಿನ ತರಬೇತಿಯನ್ನು ನಡೆಸುತ್ತಿದ್ದಾಗ ವಿಮಾನ ಅಪಘಾತಕ್ಕೆ ಒಳಗಾಗಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಎಎನ್ಐ ಸುದ್ಧಿಸಂಸ್ಥೆ ವರದಿ ಮಾಡಿದೆ. ಆದರೆ ಈ ವಿಚಾರವಾಗಿ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ. ಇನ್ನು ಘಟನೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆಗೆ ಆದೇಶಿಲಾಗಿದೆ.

ಇದು ಈ ವರ್ಷ ನಡೆದ ಮಿಗ್ 21 ವಿಮಾನದ ಮೂರನೇ ಅಪಘಾತವಾಗಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಮಿಗ್ 21 ಬಿಸನ್ ವಿಮಾನವೊಂದು ಅಪಘಾತವಾದಾಗ ಗ್ರೂಪ್ ಕ್ಯಾಪ್ಟನ್ ಎ ಗುಪ್ತ ಎಂಬವರು ಮೃತಪಟ್ಟಿದ್ದರು. ಇದಕ್ಕೂ ಮುನ್ನ ಜನವರಿ ತಿಂಗಳಿನಲ್ಲಿ ರಾಜಸ್ಥಾನದ ಸೂರತ್ಗರ್ ಎಂಬಲ್ಲಿ ಅಪಘಾತ ನಡೆದಿದ್ದು ಆ ಸಂದರ್ಭದಲ್ಲಿ ಪೈಲಟ್ ಸುರಕ್ಷಿತವಾಗಿ ವಿಮಾನದಿಂದ ಬೇರ್ಪಟ್ಟಿದ್ದರು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications