ಹಿಂದೂ ಎಂಬ ಕಾರಣಕ್ಕೆ ಸಿಎಂ ಅಭ್ಯರ್ಥಿಯಾಗಲು ಸಾಧ್ಯವಾಗಿಲ್ಲ: ಸುನಿಲ್
ಚಂಡೀಗಢ, ಫೆಬ್ರವರಿ 2: ''ನಾನು ಹಿಂದೂ ಎಂಬ ಕಾರಣಕ್ಕೆ ಸಿಎಂ ಅಭ್ಯರ್ಥಿಯಾಗಲು ಸಾಧ್ಯವಾಗಿಲ್ಲ'' ಎಂದು ಕಾಂಗ್ರೆಸ್ ಮುಖಂಡ ಸುನಿಲ್ ಜಾಖರ್ ಹೇಳಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಂಜಾಬ್ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಪೈಪೋಟಿ ಪಕ್ಷದೊಳಗೆ ಬಿರುಕು ಮೂಡಿಸಿದೆ. ಕಾಂಗ್ರೆಸ್ ಮುಖಂಡ ಸುನೀಲ್ ಜಾಖರ್ ಕಾಂಗ್ರೆಸ್ ಮುಖಂಡರ ವರ್ತನೆಯಿಂದ ಬೇಸರಗೊಂಡಿದ್ದಾರೆ.
ದಲಿತ ಅಭ್ಯರ್ಥಿಯನ್ನು ಬೆಂಬಲಿಸುವುದು ಉತ್ತಮ ಆಯ್ಕೆಯಾಗಿದ್ದರೆ ಪಕ್ಷವು ಅವರನ್ನು ಬೆಂಬಲಿಸಲಿ. ಪಂಜಾಬ್ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆದಷ್ಟು ಬೇಗ ನಿರ್ಧರಿಸಬೇಕು ಎಂದು ಜಾಖರ್ ಹೇಳಿದರು.

'ದೆಹಲಿಯಲ್ಲಿ ಸಲಹೆಗಾರರು ಸರಿಯಾದ ಸಲಹೆ ನೀಡುತ್ತಿಲ್ಲ. ನಾನು ಶಾಸಕನಾಗದ ಕಾರಣಕ್ಕೆ ಸಿಎಂ ಅಭ್ಯರ್ಥಿ ಮಾಡಲು ಆಗುವುದಿಲ್ಲ ಎಂದು ಹೇಳಿದರೆ ತಪ್ಪು ಎನಿಸುತ್ತಿರಲಿಲ್ಲ.
ಆದರೆ ನಾನು ಪಂಜಾಬಿ ಹಿಂದೂ ಎಂಬ ಕಾರಣಕ್ಕಾಗಿ ತಿರಸ್ಕರಿಸಿರುವುದು ಸರಿಯಲ್ಲ ಅದರಿಂದ ನೀವು ಇಡೀ ಸಮುದಾಯವನ್ನು ಅಸಮಾಧಾನಗೊಳಿಸಿದ್ದೀರಿ ಎಂದು ಜಾಖರ್ ಹೇಳಿದ್ದಾರೆ.
ಹಿಂದು ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ತಿರಸ್ಕರಿಸಿರುವುದು ನೋವನ್ನುಂಟು ಮಾಡಿದೆ ಎಂದು ಮುಂಜಾನೆ ಸ್ಪರ್ಧೆಯಿಂದ ಉಚ್ಛಾಟಿತಗೊಂಡಿರುವ ಕಾಂಗ್ರೆಸ್ ಮುಖಂಡ ಸುನೀಲ್ ಜಾಖರ್ ಹೇಳಿದ್ದಾರೆ.
ಪಂಜಾಬ್ ಜಾತ್ಯತೀತ ರಾಜ್ಯ. ಆದರೆ ದೆಹಲಿಯಲ್ಲಿರುವ ಕಾಂಗ್ರೆಸ್ ಸಲಹೆಗಾರರು ಪಂಜಾಬ್ ಸಿಎಂ ಹುದ್ದೆಗೆ ಸಿಖ್ ಅಭ್ಯರ್ಥಿ ಸೂಕ್ತ ಎಂದು ಹೇಳಿರುವುದು ನನಗೆ ನೋವು ತಂದಿದೆ ಎಂದು ಜಾಖರ್ ಹೇಳಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 20ರಂದು ನಡೆಯಲಿದೆ. ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಜಾರಿ ಆಗಿದೆ.. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.












Click it and Unblock the Notifications