Breaking news: ಪಂಜಾಬ್‌ ಚುನಾವಣೆ: ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಎಎಪಿ

ಚಂಡೀಗಢ, ಜನವರಿ 18: ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷ ಮಂಗಳವಾರ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಎಎಪಿ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮನ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎಎಪಿ ಘೋಷಣೆ ಮಾಡಿದೆ.

ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಯಾವ ಪಕ್ಷದಿಂದ, ಯಾರು ಮುಖ್ಯಮಂತ್ರಿ ಅಭ್ಯರ್ಥಿ ಆಗಲಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಹಲವಾರು ಬಾರಿ ಶೀಘ್ರದಲ್ಲೇ ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷನೆ ಮಾಡಲಾಗುವುದು ಎಂದು ಹೇಳಿದ್ದ ಎಎಪಿ ಈಗ ಕೊನೆಗೂ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ.

ಪಂಜಾಬ್‌ನಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲುವು ಸಾಧಿಸಿದರೆ ಪಕ್ಷದಿಂದ ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಎಎಪಿ ಜನರ ಅಭಿಪ್ರಾಯವನ್ನು ಪಡೆದಿದೆ. ಎಎಪಿ, ಗಮನಾರ್ಹವಾಗಿ, ವಿಧಾನಸಭೆ ಚುನಾವಣೆಗೆ ತನ್ನ ಸಿಎಂ ಮುಖವನ್ನು ಆಯ್ಕೆ ಮಾಡುವ ಅಭಿಯಾನದ ಅಡಿಯಲ್ಲಿ ಸುಮಾರು 22 ಲಕ್ಷ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ. ಜನರ ಪ್ರತಿಕ್ರಿಯೆಯ ಆಧಾರದಲ್ಲಿಎಎಎಪಿ ಪಂಜಾಬ್‌ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್ ಮನ್‌ ಹೆಸರನ್ನು ಘೋಷಣೆ ಮಾಡಿದೆ.

Punjab Poll: Aap Names Bhagwant Mann as Chief Minister Candidate Based on Public Votes

ಕೇಜ್ರಿವಾಲ್ ಜನವರಿ 13 ರಂದು ಪಂಜಾಬ್‌ನ ಜನರಿಗೆ ತಮ್ಮ ಆದ್ಯತೆಯ ಮುಖ್ಯಮಂತ್ರಿ ಅಭ್ಯರ್ಥಿಗಳ ಹೆಸರನ್ನು ಸೂಚಿಸುವಂತೆ ಕೇಳಿದ್ದರು. ಹಾಗೆಯೇ ಇದಕ್ಕಾಗಿ ಮೊಬೈಲ್ ಸಂಖ್ಯೆಯನ್ನು ಉಲ್ಲೇಖ ಮಾಡಿದ್ದರು. ಎಎಪಿ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮನ್‌ ಹೆಸರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕೆಂದು ತಾನು ಬಯಸಿದ್ದರು ಎಂದು ಈಗಾಗಲೇ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಈವರೆಗೆ 112 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

Recommended Video

      IPLನಲ್ಲಿ ಈ ನೂತನ ತಂಡದ captain Hardik Pandya | Oneindia Kannada

      ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+