ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ ಚುನಾವಣೆ: ಸರ್ಕಾರಿ ಉದ್ಯೋಗದಲ್ಲಿ ರಾಜ್ಯದ ಶೇ.75 ಯುವಕರಿಗೆ ಮೀಸಲಾತಿ, ಬಿಜೆಪಿ ಭರವಸೆ

|
Google Oneindia Kannada News

ಚಂಡೀಗಢ, ಫೆಬ್ರವರಿ 13: ಬಿಜೆಪಿ ನೇತೃತ್ವದ ಎನ್‌ಡಿಎ ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ರಾಜ್ಯದ ಯುವಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡ 75 ಹಾಗೂ ಖಾಸಗಿ ಉದ್ಯೋಗಗಳಲ್ಲಿ ಶೇಕಡ ಶೇಕಡ 50ರಷ್ಟು ಮೀಸಲಾತಿ ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.

ಬಿಜೆಪಿ ಪಂಜಾಬ್‌ನಲ್ಲಿ ಸರ್ಕಾರವನ್ನು ರಚಿಸಿದರೆ ಜನರಿಗೆ ನಿರುದ್ಯೋಗ ಭತ್ಯೆ, ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 35 ಪ್ರತಿಶತ ಮೀಸಲಾತಿ ಮತ್ತು ರಾಜ್ಯದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಬೃಹತ್ ಮೂಲಸೌಕರ್ಯ ಅಭಿವೃದ್ಧಿಗೆ ಭರವಸೆ ನೀಡಿದೆ. ಪ್ರಣಾಳಿಕೆಯಂತೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮ ವ್ಯಸನದ ಪರೀಕ್ಷೆಯನ್ನು ನಡೆಸುವ ಕಡ್ಡಾಯಗೊಳಿಸಲಾಗಿದೆ ಎಂದು ಕೂಡಾ ಉಲ್ಲೇಖ ಮಾಡಿದೆ.

 ಪಂಜಾಬ್‌ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರ ಸಾಲ ಮನ್ನಾ ಭರವಸೆ ಪಂಜಾಬ್‌ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರ ಸಾಲ ಮನ್ನಾ ಭರವಸೆ

ಎಲ್ಲಾ ಪದವೀಧರರಿಗೆ ಅವರ ಪದವಿ ಮುಗಿದ ನಂತರ ಎರಡು ವರ್ಷಗಳವರೆಗೆ ಮಾಸಿಕ ರೂ 4,000 ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಕೂಡಾ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿದೆ. ಗುತ್ತಿಗೆ ಉದ್ಯೋಗ ಸೇರಿದಂತೆ ಎಲ್ಲ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿ ನೀಡುವುದಾಗಿಯೂ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ.

Punjab Poll: BJP Releases Manifesto, Promises 75 PC Reservation to State Youth in Govt Jobs

ಮಹಿಳೆಯರಿಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ ಭರವಸೆ

ಮಹಿಳೆಯರ ಮೇಲಿನ ಯಾವುದೇ ರೀತಿಯ ದೌರ್ಜನ್ಯ, ಕಿರುಕುಳ ಮತ್ತು ದಬ್ಬಾಳಿಕೆಯನ್ನು ಎದುರಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಬಿಜೆಪಿ ಹೇಳಿದೆ. ಎನ್‌ಆರ್‌ಐಗಳು ಬಿಟ್ಟು ಹೋದ ವಧುಗಳ ಪ್ರಕರಣಗಳನ್ನು ಎದುರಿಸಲು ವಿಶೇಷ ಕಾಯ್ದೆಯನ್ನು ರಚಿಸಲಾಗುವುದು ಎಂದು ಬಿಜೆಪಿ ಹೇಳಿದೆ. ಬಿಜೆಪಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ಸಿಂಗ್ ದಿಂಡಾ ಅವರ ಎಸ್‌ಎಡಿ (ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಈ ಹಿಂದೆ ವಿಧಾನಸಭಾ ಚುನಾವಣೆಗೆ 11 ಅಂಶಗಳ 'ಸಂಕಲ್ಪ' (ಪ್ರತಿಜ್ಞೆ ಅಥವಾ ಬದ್ಧತೆ) ಬಿಡುಗಡೆ ಮಾಡಿತ್ತು, ಮತ್ತು ನಂತರ ಗ್ರಾಮೀಣ ವಲಯಕ್ಕೆ ಮತ್ತೊಂದು ದಾಖಲೆಯನ್ನು ಬಿಡುಗಡೆ ಮಾಡಿತ್ತು. ಬಿಜೆಪಿಯ ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರ ಸಚಿವ ಮತ್ತು ಪಂಜಾಬ್‌ನ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್, ಶಿರೋಮಣಿ ಅಕಾಲಿದಳ-ಸಂಯುಕ್ತ್ ನಾಯಕ ಸುಖದೇವ್ ಸಿಂಗ್ ದಿಂಡಾ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಶರ್ಮಾ, "ಈ ಪ್ರಣಾಳಿಕೆಯನ್ನು ಭವಿಷ್ಯದ ಪ್ರಣಾಳಿಕೆಯಾಗಿದೆ" ಎಂದು ಹೇಳಿದ್ದಾರೆ.

ಪಂಜಾಬ್: ನಟಿ ಮಾಹಿ ಗಿಲ್, ನಟ ಧಲಿವಾಲ್ ಬಿಜೆಪಿಗೆ ಸೇರ್ಪಡೆಪಂಜಾಬ್: ನಟಿ ಮಾಹಿ ಗಿಲ್, ನಟ ಧಲಿವಾಲ್ ಬಿಜೆಪಿಗೆ ಸೇರ್ಪಡೆ

ಈ ಹಿಂದಿನ ಬಿಜೆಪಿ ಪ್ರಣಾಳಿಕೆ

Recommended Video

ಹಿಜಾಬ್ ಧಾರಿಣಿ ಮುಂದಿನ ಪ್ರಧಾನಿಯಾಗೋದು ಗ್ಯಾರೆಂಟಿ ಎಂದ ಓವೈಸಿ | Oneindia Kannada

ಈ ಹಿಂದಿನ ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ರೈತರ ಮೇಲೆ ಹೆಚ್ಚು ಗಮನೀಕರಿಸಿ ಭರವಸೆಗಳನ್ನು ಬಿಜೆಪಿ ನೀಡಿದೆ. ಈ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಬಿಜೆಪಿ ಭರವಸೆ ನೀಡಿದೆ. ಬೆಳೆ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಮತ್ತು ಅದನ್ನು ಹೆಚ್ಚು ಲಾಭದಾಯಕವಾಗಿಸಲು, ಮೈತ್ರಿ ಪಕ್ಷವು ಕೃಷಿಗಾಗಿ 5,000 ಕೋಟಿ ರೂಪಾಯಿಗಳ ಮೀಸಲಾದ ವಾರ್ಷಿಕ ಬಜೆಟ್‌ಗೆ ಭರವಸೆ ನೀಡಿದೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ರೈತರ ಮೇಲೆ ಹೆಚ್ಚು ಗಮನ ಹರಿಸಿದೆ. ಮಹಿಳೆಯರು ಮತ್ತು ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹೈನುಗಾರಿಕೆ, ಕೋಳಿ ಸಾಕಣೆ ಮತ್ತು ಜೇನುಸಾಕಣೆಯಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು ಸಹಾಯಧನ ಮತ್ತು ಸಾಲ ನೀಡಲಾಗುವುದು ಎಂದು ಭರವಸೆ ನೀಡಿದೆ. ಪ್ರಣಾಳಿಕೆಯು ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಸಹಾಯಧನದ ಭರವಸೆ ನೀಡಿದೆ. (ಒನ್‌ಇಂಡಿಯಾ ಸುದ್ದಿ)

English summary
Punjab Poll: BJP releases manifesto, promises 75 pc reservation to state youth in govt jobs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X