ಪಂಜಾಬ್‌ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ರೈತರ ಸಾಲ ಮನ್ನಾ ಭರವಸೆ
ಚಂಡೀಗಢ, ಫೆಬ್ರವರಿ 08: ಮಂಗಳವಾರ ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಎಲ್ಲಾ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಬಿಜೆಪಿ ಭರವಸೆ ನೀಡಿದೆ.
ಇದಲ್ಲದೆ, ಪಕ್ಷವು "ಮೆಹನತ್ ದ ಪಕ್ಕಾ ಮುಲ್" ಭರವಸೆಯನ್ನು ನೀಡಿದೆ. ಅಂದರೆ ಕೆಲಸಕ್ಕೆ ತಪ್ಪ ಪ್ರತಿಫಲ ದೊರೆಯಲಿದೆ ಎಂದು ಬಿಜೆಪಿ ಭರವಸೆ ನೀಡಿದೆ. ಹಣ್ಣುಗಳು, ತರಕಾರಿಗಳು, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳನ್ನು ಬೆಳೆಯುವ ರೈತರಿಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (MSP) ವಿಸ್ತರಣೆ ಕಾರ್ಯಕ್ರಮದ ಅಡಿಯಲ್ಲಿ ಖಾತರಿಯನ್ನು ನೀಡಲಾಗುತ್ತದೆ ಎಂದು ಕೂಡಾ ಬಿಜೆಪಿ ಹೇಳಿದೆ.
ಬೆಳೆ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಮತ್ತು ಅದನ್ನು ಹೆಚ್ಚು ಲಾಭದಾಯಕವಾಗಿಸಲು, ಮೈತ್ರಿ ಪಕ್ಷವು ಕೃಷಿಗಾಗಿ 5,000 ಕೋಟಿ ರೂಪಾಯಿಗಳ ಮೀಸಲಾದ ವಾರ್ಷಿಕ ಬಜೆಟ್‌ಗೆ ಭರವಸೆ ನೀಡಿದೆ. ಬಿಜೆಪಿಯ ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರ ಸಚಿವ ಮತ್ತು ಪಂಜಾಬ್‌ನ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್, ಶಿರೋಮಣಿ ಅಕಾಲಿದಳ-ಸಂಯುಕ್ತ್ ನಾಯಕ ಸುಖದೇವ್ ಸಿಂಗ್ ದಿಂಡಾ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಶರ್ಮಾ, "ಈ ಪ್ರಣಾಳಿಕೆಯನ್ನು ಭವಿಷ್ಯದ ಪ್ರಣಾಳಿಕೆಯಾಗಿದೆ" ಎಂದು ಹೇಳಿದ್ದಾರೆ. ಪಂಜಾಬ್‌ನಲ್ಲಿ ಗ್ರಾಮೀಣ ಮತ್ತು ಕೃಷಿ ಆರ್ಥಿಕತೆಯ ಕ್ರಾಂತಿಗೆ ನಿರ್ಧಾರ ಮಾಡಿದ್ದಾರೆ.

ಪ್ರಣಾಳಿಕೆಯಲ್ಲಿ ಬಿಜೆಪಿಯ ಭರವಸೆಗಳ ಮಹಾಪೂರ
ಬಿಜೆಪಿಯು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ (PLC) ಮತ್ತು ಸುಖದೇವ್ ಸಿಂಗ್ ಧಿಂಡ್ಸಾ ನೇತೃತ್ವದ ಶಿರೋಮಣಿ ಅಕಾಲಿದಳ (ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತಿದೆ. ಈಗ ಮೈತ್ರಿಕೂಟ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಂದು ಲಕ್ಷ ಎಕರೆ ಶಾಮಲತ್ ಭೂಮಿಯನ್ನು ಗ್ರಾಮೀಣ ಭೂರಹಿತ ರೈತರಿಗೆ ಸಾಗುವಳಿ ಮಾಡಲು ಹಂಚಿಕೆ ಮಾಡಲಾಗುವುದು ಎಂದು ಮೈತ್ರಿಕೂಟ ಭರವಸೆ ನೀಡಿದೆ. ಅಲ್ಲದೆ, ರಾಜ್ಯದ ಪ್ರತಿಯೊಬ್ಬ ಭೂರಹಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿದೆ.
ಸುಸ್ಥಿರ ಹಸಿರು ಕ್ರಾಂತಿಗಾಗಿ ರಾಜ್ಯದಲ್ಲಿ ಸುಸ್ಥಿರ ಕೃಷಿ ಮತ್ತು ಸಾವಯವ ಕೃಷಿಯನ್ನು ಬೆಂಬಲಿಸಲು ವಾರ್ಷಿಕ 5,000 ಕೋಟಿ ರೂಪಾಯಿಗಳ ಬಜೆಟ್ ನೀಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಪಂಜಾಬ್‌ನ ಕ್ಷೀಣಿಸುತ್ತಿರುವ ನೀರಿನ ಮಟ್ಟವನ್ನು ಸಂರಕ್ಷಿಸಲು ವಿಶೇಷ ಒತ್ತು ನೀಡಲು, ಉಚಿತವಾಗಿ ಮಳೆನೀರು ಕೊಯ್ಲು ಘಟಕಗಳನ್ನು ಸ್ಥಾಪಿಸಲಾಗುವುದು. ಪರ್ಯಾಯ ಸ್ವಯಂಚಾಲಿತ ಮತ್ತು ಸ್ಮಾರ್ಟ್ ನೀರಾವರಿ ವ್ಯವಸ್ಥೆಗಳಿಗೆ ಸಬ್ಸಿಡಿ ನೀಡಲಾಗುವುದು, ಇದು ನೀರಿನ ಸಂರಕ್ಷಣೆಗೆ ಸಹಾಯ ಮಾಡುತ್ತದೆ. ನೀರಾವರಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂದು ಕೂಡಾ ಬಿಜೆಪಿ ಹೇಳಿದೆ.
ರೈತರತ್ತ ಬಿಜೆಪಿಯ ಸಂಪೂರ್ಣ ಚಿತ್ತ!
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ರೈತರ ಮೇಲೆ ಹೆಚ್ಚು ಗಮನ ಹರಿಸಿದೆ. ಮಹಿಳೆಯರು ಮತ್ತು ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹೈನುಗಾರಿಕೆ, ಕೋಳಿ ಸಾಕಣೆ ಮತ್ತು ಜೇನುಸಾಕಣೆಯಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು ಸಹಾಯಧನ ಮತ್ತು ಸಾಲ ನೀಡಲಾಗುವುದು ಎಂದು ಭರವಸೆ ನೀಡಿದೆ. ಪ್ರಣಾಳಿಕೆಯು ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮದಡಿಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಸಹಾಯಧನದ ಭರವಸೆ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೂಡಿಕೆಯನ್ನು ಆಕರ್ಷಿಸಲು ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಒಳಗೊಂಡಿರುವ ತೆರಿಗೆ ವಿನಾಯಿತಿ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‌ಗಳನ್ನು ರಚಿಸಲಾಗುತ್ತದೆ. ಮೆಗಾ ಫುಡ್ ಪ್ರೊಸೆಸಿಂಗ್ ಪಾರ್ಕ್‌ಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಹೇಳಿದೆ. 15 ನಿಮಿಷಗಳಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ "108 ಆಂಬ್ಯುಲೆನ್ಸ್" ಸೇವೆಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲಾಗುವುದು. ಈ ಪ್ರಯತ್ನವನ್ನು ಸಾಧಿಸಲು ಖಾಯಂ ಚಾಲಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಕೂಡಾ ತಿಳಿಸಿದೆ. (ಒನ್‌ಇಂಡಿಯಾ ಸುದ್ದಿ)












Click it and Unblock the Notifications