ಪಂಜಾಬ್ ಸಿಎಂ ಅಭ್ಯರ್ಥಿ ಯಾರಾಗಬೇಕು?: ಕಾಂಗ್ರೆಸ್‌ನಿಂದ ಹಾಡು ಬಿಡುಗಡೆ
ಚಂಡೀಗಢ, ಫೆಬ್ರವರಿ 03: ಪಂಜಾಬ್‌ನಲ್ಲಿ ಇನ್ನು ಕೆಲವೇ ವಾರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ತಯಾರಿಯನ್ನು ನಡೆಸುತ್ತಿದೆ. ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ಈಗಾಗಲೇ ಎಎಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ನಡುವೆ ಆಡಳಿತಾರೂಢ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಕೂಗು ಕೇಳಿ ಬಂದಿದೆ. ಈ ಹಿನ್ನೆಲೆ ಪಂಜಾಬ್ ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬ ವಿಚಾರದಲ್ಲಿ ಜನರಿಂದ ಅಭಿಪ್ರಾಯವನ್ನು ಸಂಗ್ರಹ ಮಾಡಲು ಥೀಮ್ ಹಾಡನ್ನು ಬಿಡುಗಡೆ ಮಾಡಿದೆ.
ಹೌದು, 'ಪಂಜಾಬ್ ದಿ ಚದ್ಧಿ ಕಾಲಾ, ಕಾಂಗ್ರೆಸ್ ಮಾಂಗೆ ಸರ್ಬತ್ ದ ಭಲ್ಲಾ' ಅಡಿಯಲ್ಲಿ ತನ್ನ ಡಿಜಿಟಲ್ ಅಭಿಯಾನದ ಮುಂದಿನ ಹಂತಕ್ಕೆ ತೆರಳುತ್ತಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಂಜಾಬ್ ಘಟಕವು ತನ್ನ ಥೀಮ್ ಹಾಡನ್ನು ಬುಧವಾರ ಬಿಡುಗಡೆ ಮಾಡಿದೆ.
ಇದಕ್ಕೂ ಮುನ್ನ, ಪಕ್ಷದ ಸ್ಟಾರ್ ಪ್ರಚಾರಕರು ಮತ್ತು ಸಿಎಂ ಅಭ್ಯರ್ಥಿ ಸ್ಪರ್ಧಿಗಳಾದ ನವಜೋತ್ ಸಿಂಗ್ ಸಿಧು ಮತ್ತು ಚರಣ್‌ಜೀತ್ ಸಿಂಗ್ ಚನ್ನಿ ಮೇಲೆ ಕೇಂದ್ರೀಕರಿಸಿದ ಆಡಿಯೋ-ವಿಡಿಯೋ ಥೀಮ್ ಹಾಡಿನ ಟೀಸರ್ ಅನ್ನು ಬುಧವಾರ ಬೆಳಿಗ್ಗೆ ಕಾಂಗ್ರೆಸ್ನ ಪಂಜಾಬ್ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ಟೀಸರ್‌ನಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಇಬ್ಬರ ಚಿತ್ರಗಳನ್ನು ಒಳಗೊಂಡಿದೆ.

ಕಾಂಗ್ರೆಸ್‌ನಿಂದ ಹೇಗೆ ಜನರ ಅಭಿಪ್ರಾಯ ಸಂಗ್ರಹ?
ಕಾಂಗ್ರೆಸ್ ಪಕ್ಷದಲ್ಲಿ ಡಿಜಿಟಲ್ ಸಂಬಂಧಿಸಿದ ಕಾರ್ಯವನ್ನು ಮಾಡುವವರು ಟೀಸರ್ ಮತ್ತು ಥೀಮ್ ಸಾಂಗ್ ಬಿಡುಗಡೆಯು ಪಕ್ಷದ ಪ್ರಚಾರದಲ್ಲಿ ಮತದಾರರಲ್ಲಿ ಆಸಕ್ತಿಯನ್ನು ಹುಟ್ಟುಹಾಕುತ್ತದೆ ಮತ್ತು ಆಯಾ ವಿಧಾನಸಭಾ ಭಾಗದಲ್ಲಿ ಪಕ್ಷದ ಅಭ್ಯರ್ಥಿಗಳೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಹಾಯಕವಾಗಿದೆ ಎಂದು ನಂಬಿದ್ದಾರೆ.ಟೀಸರ್ ರಾಜ್ಯದಾದ್ಯಂತ ಮತದಾರರ ಮೊಬೈಲ್ ಸಂಖ್ಯೆಗಳಿಗೆ ಕಳುಹಿಸಲಾಗುತ್ತಿರುವ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ಸಿಸ್ಟಮ್ (ಐವಿಆರ್‌ಎಸ್) ಕುರಿತು ಮೊದಲೇ ರೆಕಾರ್ಡ್ ಮಾಡಿದ ಸಂದೇಶದ ಮೂಲಕ ಮತದಾರರ ಅಭಿಪ್ರಾಯದ ಪ್ರಕಾರ ಪಕ್ಷದ ಸಿಎಂ ಅಭ್ಯರ್ಥಿ ಮುಖ ನವಜೋತ್ ಸಿಂಗ್ ಸಿಧು ಮತ್ತು ಚರಣ್‌ಜೀತ್ ಸಿಂಗ್ ಚನ್ನಿ ಎಂದು ಬಿಂಬಿಸಲಾಗಿದೆ. ಮೊಬೈಲ್ ಸಂಪರ್ಕ ಹೊಂದಿರುವ ಸುಮಾರು 1.5 ಕೋಟಿ ಮತದಾರರಿಗೆ ಐವಿಆರ್‌ಎಸ್ ಸಂದೇಶವನ್ನು ಕಳುಹಿಸುವ ಗುರಿಯನ್ನು ಪಕ್ಷದ ಮುಖಂಡರು ಹೊಂದಿದ್ದಾರೆ.

ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ಕೆ ಇದೆ?
ಮತದಾರರಿಗೆ ಮೂರು ಆಯ್ಕೆಗಳನ್ನು ನೀಡಲಾಗಿದೆ. ಒಂದನೇ ಆಯ್ಕೆ ನವಜೋತ್ ಸಿಂಗ್ ಸಿಧು, ಎರಡನೇ ಆಯ್ಕೆ ಚರಣ್‌ಜೀತ್ ಸಿಂಗ್ ಚನ್ನಿ ಹಾಗೂ ಮೂರನೇ ಆಯ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಬೇಡ. ಇನ್ನು ಎಲ್ಲಾ 117 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು, ಎಐಸಿಸಿ ಮುಖಂಡರು ಹಾಗೂ ಸಮೀಕ್ಷಾ ತಂಡಗಳ ಮೂಲಕವೂ ಪ್ರತಿಕ್ರಿಯೆ ಕೇಳಲಾಗುತ್ತಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಜಂಟಿ ಕಾರ್ಯದರ್ಶಿ ಮತ್ತು ಪಂಜಾಬ್‌ನ ಚುನಾವಣಾ ನಿಯಂತ್ರಣ ಕೊಠಡಿಯ ಉಸ್ತುವಾರಿ ಗೋಕುಲ್ ಬುಟೇಲ್, "ಐವಿಆರ್‌ಎಸ್ ವ್ಯವಸ್ಥೆಯ ಮೂಲಕ ಪ್ರತಿಕ್ರಿಯೆಯನ್ನು ಪಡೆಯಲಾಗುತ್ತಿದೆ," ಎಂದು ಹೇಳಿದರು.

ಫೆಬ್ರವರಿ 7 ಮತ್ತು 10 ರ ನಡುವೆ ಸಿಎಂ ಘೋಷಣೆ
ಇನ್ನು ಬ್ಲಾಕ್ ಮಟ್ಟದಲ್ಲಿ ಕಾರ್ಯನಿರ್ವಾಹಕರು ಮತ್ತು ಜಿಲ್ಲಾ ಉಸ್ತುವಾರಿಗಳು ಸೇರಿದಂತೆ ಸುಮಾರು ನಾಲ್ಕು ಲಕ್ಷ ಪಕ್ಷದ ಕಾರ್ಯಕರ್ತರನ್ನು ಪಕ್ಷವು ಸಿಎಂ ಅಭ್ಯರ್ಥಿ ವಿಚಾರದಲ್ಲಿ ತಲುಪುತ್ತಿದೆ. ಫೆಬ್ರವರಿ 7 ಮತ್ತು 10 ರ ನಡುವೆ ಪಕ್ಷವು ಸಿಎಂ ಮುಖವನ್ನು ಘೋಷಿಸುವ ನಿರೀಕ್ಷೆಯಿದೆ. ಫೆಬ್ರವರಿ ಮೊದಲ ವಾರದಲ್ಲಿ ರಾಹುಲ್ ಗಾಂಧಿ ಮಾಲ್ವಾ ಪ್ರದೇಶಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಪಂಜಾಬ್ ವಿಧಾನಸಭೆ ಚುನಾವಣೆ
2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಆದರೆ ಶಿರೋಮಣಿ ಅಕಾಲಿದಳವು ಕೇವಲ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications