ಪಂಜಾಬ್ ಚುನಾವಣೆ: ದ್ವೇಷ ಭಾಷಣ ವಿಡಿಯೋ ವೈರಲ್, ಸಿಧು ಸಲಹೆಗಾರರ ವಿರುದ್ಧ ಎಫ್‌ಐಆರ್
ಚಂಡೀಗಢ, ಜನವರಿ 23: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರ ಸಲಹೆಗಾರ, ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ದ್ವೇಷ ಭಾಷಣ ವಿಡಿಯೋ ವೈರಲ್ ಆದ ನಂತರ, ಪಂಜಾಬ್ ಪೊಲೀಸರು ಭಾನುವಾರದಂದು ಎಫ್‌ಐಆರ್ ದಾಖಲು ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಮಲೇರ್‌ಕೋಟ್ಲಾದಲ್ಲಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಮುದಾಯಗಳ ನಡುವೆ ದ್ವೇಷಕ್ಕೆ ಪ್ರಚೋದನೆ ನೀಡಿದ ಕಾರಣದಿಂದಾಗಿ ಮೊಹಮ್ಮದ್ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆತನ ಮೇಲೆ ಐಪಿಸಿ ಸೆಕ್ಷನ್ 153-ಎ ಅನ್ನು ಹಾಕಿದ್ದಾರೆ ಎಂದು ವರದಿಯು ಹೇಳಿದೆ.
ಮಲೇರ್‌ಕೋಟ್ಲಾದಲ್ಲಿ ಮುಸ್ಲಿಮರನ್ನುದ್ದೇಶಿಸಿ ಭಾಷಣ ಮಾಡಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರ ಸಲಹೆಗಾರ, ಮಾಜಿ ಡಿಜಿಪಿ ಮೊಹಮ್ಮದ್ ಮುಸ್ತಫಾ ಒಂದು ಸಮುದಾಯದ ವಿರುದ್ಧವಾಗಿ ಮಾತನಾಡಿದ್ದಾರೆ ಎಂದು ವರದಿಯು ಉಲ್ಲೇಖ ಮಾಡಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಚುನಾವಣಾ ಆಯೋಗವು ಈ ವಿಡಿಯೋವನ್ನು ಪರಿಶೀಲಿಸಿ ಮೊಹಮ್ಮದ್ ಮುಸ್ತಫಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮಲೇರ್‌ಕೋಟ್ಲಾದಲ್ಲಿ ಮುಸ್ಲಿಮರನ್ನುದ್ದೇಶಿಸಿ ಮಾಡಿದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮೊಹಮ್ಮದ್ ಮುಸ್ತಫಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಗರ ಎಸ್‌ಎಚ್‌ಒ ಮಲೇರ್‌ಕೋಟ್ಲಾ ಇನ್ಸ್‌ಪೆಕ್ಟರ್ ಕರಮ್‌ವೀರ್ ಸಿಂಗ್ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಚುನಾವಣಾ ಆಯೋಗದ ಆದೇಶದ ಮೇರೆಗೆ ದಾಖಲಾದ ಪ್ರಕರಣವನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲ್ಲ. ಆದರೆ ಚುನಾವಣಾ ಆಯೋಗವು ಈ ವಿಡಿಯೋವನ್ನು ಪರಿಶೀಲಿಸಿ ಮೊಹಮ್ಮದ್ ಮುಸ್ತಫಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
@sambitswaraj, DON'T LOOK 4 YOUR STAPLE DIET "HINDU-MUSALMAN" INTO EVERYTHING. UNLESS YOUR EARDRUMS LIE DYSFUNCTIONAL, STRETCH YOUR EARS TO LISTEN "FITNON", NOT "HINDUON". "फितने और फ़ितनों " MEANING MISCHIEVOUS ELEMENTS, ARE THE MOST COMMONLY USED EXPRESSIONS IN MY SAMAJ. 1\N pic.twitter.com/uqu5mmCzmZ
— MOHD MUSTAFA, FORMER IPS (@MohdMustafaips) January 22, 2022
ಮೊಹಮ್ಮದ್ ಮುಸ್ತಫಾ ಹೇಳುವುದು ಏನು?
ಎಫ್‌ಐಆರ್ ಬಗ್ಗೆ ಪ್ರತಿಕ್ರಿಯಿಸಿದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧುರ ಸಲಹೆಗಾರ ಮೊಹಮ್ಮದ್ ಮುಸ್ತಫಾ, ಈ ಎಫ್‌ಐಆರ್ ಅಸಂಬದ್ಧ ಎಂದು ಹೇಳಿದ್ದಾರೆ. "ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಸುತ್ತಿರುವಂತೆ ನಾನು ಹಿಂದೂಗಳನ್ನು ಗುರಿಯಾಗಿಸಿಕೊಂಡಿಲ್ಲ. ನಾನು ನಾನು 'ಫಿಟ್ನೆ' ಪದವನ್ನು ಬಳಸಿದ್ದೇನೆ. 'ಫಿಟ್ನೆ' ಎಂದರೆ ಕಾನೂನು ಉಲ್ಲಂಘಿಸುವವರು ಎಂದು ಆಗಿದೆ. ನನ್ನ ಮೇಲೆ ಹಲ್ಲೆಗೆ ಯತ್ನಿಸಿದ ಮುಸ್ಲಿಮರ ಗುಂಪಿನ ಮೇಲೆ ನಾನು ಕೋಪಗೊಂಡಿದ್ದೇನೆ. ನಾನು ಅವರಿಗೆ ಎಚ್ಚರಿಕೆ ನೀಡಿದ್ದೇನೆಯೇ ಹೊರತು ಹಿಂದೂಗಳಿಗೆ ಅಲ್ಲ," ಎಂದು ಸ್ಪಷ್ಟಣೆ ನೀಡಿದ್ದಾರೆ.
ಜನವರಿ 20 ರಂದು ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ಮೊಹಮ್ಮದ್ ಮುಸ್ತಫಾ ಅವರು ಕಾರ್ಯಕ್ರಮಗಳನ್ನು ಆಯೋಜಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ವೀಡಿಯೊ ವೈರಲ್ ಆಗಿದೆ. ವಿಡಿಯೋದಲ್ಲಿ ನಿರ್ದಿಷ್ಟ ಸಮುದಾಯಕ್ಕೆ ತಮ್ಮ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಸಿದರೆ ನಿಯಂತ್ರಿಸಲಾಗದ ಪರಿಸ್ಥಿತಿಯನ್ನು ಸೃಷ್ಟಿಸುವ ಬೆದರಿಕೆಯನ್ನು ಹಾಕಿರುವುದು ಕಂಡು ಬಂದಿದೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. 117ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಚ ರಾಜ್ಯಗಳಲ್ಲಿ ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications