ಭಯ್ಯಾ ನಿಂದನೆ: ಚನ್ನಿ ವಿರುದ್ದ ಬಿಹಾರದಲ್ಲಿ ಎಫ್‌ಐಆರ್
ಚಂಡೀಗಢ, ಫೆಬ್ರವರಿ 18: ರಾಜ್ಯದಲ್ಲಿ ಬುಧವಾರ ಚುನಾವಣಾ ರ್‍ಯಾಲಿ ಸಂದರ್ಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್, "ಯುಪಿ, ಬಿಹಾರ್ ದೇ ಭಯ್ಯಾ" ಹೇಳಿಕೆಯ ಬಗ್ಗೆ ಗದ್ದಲದ ನಡುವೆ, ಗುರುವಾರ ಬಿಹಾರದ ಪೊಲೀಸ್ ಠಾಣೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಹಿರಿಯ ಮುಖಂಡ ಮನೀಶ್ ಕುಮಾರ್ ಅವರ ದೂರಿನ ಆಧಾರದ ಮೇಲೆ ಪಾಟ್ನಾದ ಕಡಮ್‌ಕುವಾನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ ಈ ವಿಷಯವು ರಾಜಕೀಯವಾಗಿ ಸೂಕ್ಷ್ಮವಾಗಿರುವುದರಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಅಧಿಕಾರಿ ನಿರಾಕರಿಸಿದ್ದಾರೆ. "ವಿಷಯವು ತನಿಖೆಯಲ್ಲಿದೆ" ಎಂದು ಮಾತ್ರ ತಿಳಿಸಿದ್ದಾರೆ. ಈ ನಡುವೆ ಚನ್ನಿ ಹೇಳಿಕೆಗೆ ಸಿಎಂ ನಿತೀಶ್ ಕುಮಾರ್ ಗುರುವಾರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. "ಇಂತಹ ಅರ್ಥಹೀನ ಹೇಳಿಕೆಯಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. ಪಂಜಾಬ್‌ನ ಆರ್ಥಿಕ ಅಭಿವೃದ್ಧಿಯಲ್ಲಿ ಬಿಹಾರಿ ಕಾರ್ಮಿಕರ ಕೊಡುಗೆ ಮತ್ತು ಸೇವೆಯ ಬಗ್ಗೆ ಅವರಿಗೆ ತಿಳಿದಿದೆಯೇ? ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆಂದು ಅವರಿಗೆ ತಿಳಿದಿದೆಯೇ?," ಎಂದು ಪ್ರಶ್ನೆ ಮಾಡಿದ್ದಾರೆ.

ಚನ್ನಿ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಚಪ್ಪಾಳೆ ತಟ್ಟಿರುವ ಬಗ್ಗೆಯನ್ನು ಕೂಡಾ ಪ್ರಶ್ನೆ ಮಾಡಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ಚನ್ನಿಯನ್ನು ಸಮರ್ಥಿಸಿಕೊಂಡ ಪ್ರಿಯಾಂಕ ಗಾಂಧಿ ವಾದ್ರಾ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಪಂಜಾಬ್‌ನ ಮುಖ್ಯಮಂತ್ರಿ ಟೀಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, "ಸಿಎಂ ಚರಣ್‌ಜೀತ್ ಸಿಂಗ್ ಚನ್ನಿ ಪಂಜಾಬ್ ಅನ್ನು ಪಂಜಾಬಿಗಳು ನಡೆಸಬೇಕು ಎಂದು ಹೇಳಿದ್ದಾರೆ. ಅವರ [ಚನ್ನಿಯವರ] ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯುಪಿಯಿಂದ ಯಾರೂ ಪಂಜಾಬ್‌ಗೆ ಬಂದು ಆಡಳಿತ ನಡೆಸಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ," ಎಂದು ತಿಳಿಸಿದ್ದಾರೆ.
ಲಖಿಂಪುರ ಖೇರಿ ಹಿಂಸಾಚಾರವನ್ನು ಉಲ್ಲೇಖಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಯುಪಿಯಲ್ಲಿ ರೈತರನ್ನು "ಅವಮಾನಿಸಿದೆ" ಎಂದು ಹೇಳಿದರು. ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಬುಧವಾರ ಚುನಾವಣಾ ರ್‍ಯಾಲಿಯಲ್ಲಿ ವಿವಾದಾದ್ಮಕ ಹೇಳಿಕೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಸಮ್ಮುಖದಲ್ಲೇ ನೀಡಿದ್ದಾರೆ. ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿಯ "ಭೈಯಾ" ಗಳನ್ನು ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಳ್ಳುವ ಮೂಲಕ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ವಿವಾದವನ್ನು ಹುಟ್ಟು ಹಾಕಿದ್ದಾರೆ.
"ಪ್ರಿಯಾಂಕಾ ಗಾಂಧಿ ಪಂಜಾಬ್‌ನ ಸೊಸೆ. ಇಲ್ಲಿ ಆಡಳಿತ ನಡೆಸಲು ಬಂದಿರುವ 'ಉತ್ತರ ಪ್ರದೇಶ, ಬಿಹಾರ, ದೆಹಲಿ ದೇ ಭೈಯಾ'ಗಳನ್ನು ರಾಜ್ಯಕ್ಕೆ ಪ್ರವೇಶಿಸಲು ಬಿಡುವುದಿಲ್ಲ," ಎಂದು ಪಂಜಾಬ್ ಸಿಎಂ ಚರಣ್‌ಜೀತ್ ಸಿಂಗ್ ಚನ್ನಿ ಹೇಳಿದ್ದಾರೆ. ಎಎಪಿ ನಾಯಕರನ್ನು ಗುರಿಯಾಗಿರಿಸಿಕೊಂಡು ಹೇಳಿಕೆ ನೀಡಿದ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಭೈಯಾಗಳೂ (ಭೈಯಾ-bhiyas) ಎಂದು ಹೇಳಿದ್ದಾರೆ. ಉತ್ತರ ಪ್ರದೇಶ ಮತ್ತು ಬಿಹಾರದ ಜನರನ್ನು ಉಲ್ಲೇಖಿಸುವ "ಭೈಯಾ" ಪದವನ್ನು ಸಾಮಾನ್ಯವಾಗಿ ಬಳಕೆ ಮಾಡುವುದು ಆಕ್ರಮಣಕಾರಿ ಎಂದು ಪರಿಗಣಿಸಲಾಗಿದೆ. (ಒನ್‌ಇಂಡಿಯಾ ಸುದ್ದಿ)












Click it and Unblock the Notifications