ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಬಗ್ಗೆ ಚನ್ನಿ ಹೀಗೆ ಹೇಳೋದಾ!
ಚಂಡೀಗಢ, ಜನವರಿ 27: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಅವರು ಆಮ್ ಆದ್ಮಿ ಪಕ್ಷದ ಸಂಸದ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮನ್ ಅವರ ಮದ್ಯಪಾನದ ಸಮಸ್ಯೆ ಬಗ್ಗೆ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ.
ಅಮರಿಂದರ್ ಸಿಂಗ್ ಸಿಎಂ ಆಗಿದ್ದಾಗ ಮುಖ್ಯಮಂತ್ರಿ ಕಚೇರಿ 4 ಗಂಟೆಗೆ ಮುಚ್ಚುತ್ತಿತ್ತು, ಇನ್ನು ಭಗವಂತ್ ಮನ್ ಮುಖ್ಯಮಂತ್ರಿಯಾದರೆ ವ್ಯತ್ಯಾಸವೇನೆಂದರೆ ಆರು ಗಂಟೆಗೆ ಮುಚ್ಚುತ್ತದೆ, ಆದರೆ ಆರು ಗಂಟೆಯ ಬಳಿಕ ಅವರೆಲ್ಲರೂ ಸೇರುವುದು ಒಂದೇ ಕಡೆಗೆ ಎಂದು ಚನ್ನಿ ಹೇಳಿದ್ದಾರೆ.
ಪಕ್ಷದ ಅಭ್ಯರ್ಥಿ ಬಲ್ವಿಂದರ್ ಸಿಂಗ್ ಧಲಿವಾಲ್ ಅವರನ್ನು ಬೆಂಬಲಿಸಿ ಫಗ್ವಾರಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡರು.

ಕೇಜ್ರಿವಾಲ್‌ಗೆ ಒಂದು ಅವಕಾಶ ನೀಡಿ ಎಂದು ಎಲ್ಲೆಡೆ ಫಲಕ ಹಾಕಿದ್ದು ಯಾವುದೇ ಪ್ರಯೋಜನಕ್ಕೆ ಬಂದಿಲ್ಲ ಹೀಗಾಗಿ ಭಗವಂತ್ ಮನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ರಾತ್ರಿ ಇರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಇಂಥವರು ಲಭ್ಯವಿರುವುದಿಲ್ಲ, ಒಂದೊಮ್ಮೆ ಲಭ್ಯವಿದ್ದರೆ ಅಂದು ಅವರ ಬಳಿ ಮಾತನಾಡುವಂತೆಯೇ ಇರುವುದಿಲ್ಲ, ನಾನು ಮುಖ್ಯಮಂತ್ರಿಯಾದ ಬಳಿಕ ನಾನು ಸರಿಯಾಗಿ ನಿದ್ರೆ ಮಾಡಿಲ್ಲ, ಮತ್ತು ಅಧಿಕಾರಿಗಳು ಮೂರು ಪಾಳಿಯಲ್ಲಿ ನನ್ನೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದರು.
ಗೋವಾ, ಪಂಜಾಬ್, ಮಣಿಪುರ್, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 14ರಂದು ಸೋಮವಾರ ನಡೆಯಲಿದೆ. ಒಟ್ಟು ಏಳು ಹಂತಗಳಲ್ಲಿ ಪಂಚರಾಜ್ಯ ಚುನಾವಣೆ ನಡೆಯಲಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 20ರಂದು ನಡೆಯಲಿದೆ. ಜನವರಿ 25ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿರುತ್ತದೆ.
ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಬಹುದು.












Click it and Unblock the Notifications