ಅಮರೀಂದರ್‌ ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಮೈತ್ರಿಗೆ ಸ್ವಾಗತ ಎಂದ ಬಿಜೆಪಿ

ಛತ್ತೀಸ್‌ಗಢ, ಅಕ್ಟೋಬರ್‌ 20: ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಪಂಜಾಬ್‌ ಕಾಂಗ್ರೆಸ್‌ನಿಂದ ಹೊರ ಬಂದಿರುವ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಹೊಸ ಪಕ್ಷವನ್ನು ರಚನೆ ಮಾಡುವುದಾಗಿ ಮಂಗಳವಾರ ಘೋಷಣೆ ಮಾಡಿದ್ದಾರೆ. ಈ ನಡುವೆ ಬಿಜೆಪಿ ಬುಧವಾರ, "ಯಾರಿಗೆ ದೇಶ ಮುಖ್ಯವೋ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ," ಎಂದು ಪರೋಕ್ಷವಾಗಿ ಆಹ್ವಾನ ನೀಡಿದೆ.

ಅಮರೀಂದರ್‌ ಸಿಂಗ್‌ ಮಂಗಳವಾರದಂದು ಹೊಸ ಪಕ್ಷದ ಬಗ್ಗೆ ಘೋಷಣೆ ಮಾಡಿದ್ದರು. ಹಾಗೆಯೇ ರೈತರ ಸಮಸ್ಯೆ ಬಗೆಹರಿದರೆ, ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ಮೈತ್ರಿಗೆ ಸ್ವಾಗತ ಎಂದಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಪಂಜಾಬ್‌ ಬಿಜೆಪಿ ಉಸ್ತುವಾರಿ ದುಷ್ಯಂತ್‌ ಗೌತಮ್‌, ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ರನ್ನು ದೇಶಭಕ್ತ ಎಂದು ಹೊಗಳಿದ್ದಾರೆ. ಹಾಗೆಯೇ, "ಯಾರಿಗೆ ದೇಶದ ಹಿತಾಸಕ್ತಿ ಮುಖ್ಯವೋ ಅವರೊಂದಿಗೆ ಮೈತ್ರಿಯನ್ನು ಮಾಡಿಕೊಳ್ಳಲು ನಮ್ಮ ಪಕ್ಷ ಸಿದ್ಧವಾಗಿದೆ," ಎಂದು ಹೇಳಿದ್ದಾರೆ.

Punjab polls: We are ready for an alliance with Captain Amarinder Singh says BJP

ಇನ್ನು ರೈತರ ವಿಚಾರದಲ್ಲಿ ಅಮರೀಂದರ್‌ ಸಿಂಗ್‌ರ ಷರತ್ತಿನ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ, "ಸಿಂಗ್‌ ರೈತರ ಆಂದೋಲನವನ್ನು ಕೊನೆಗೊಳಿಸುವ ಬಗ್ಗೆ ಮಾತನಾಡಿಲ್ಲ," ಎಂದಿದ್ದಾರೆ. "ಸಿಂಗ್‌ ರೈತರ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ನಾವು ಈ ವಿಚಾರದಲ್ಲಿ ಬದ್ಧವಾಗಿದ್ದೇವೆ ಹಾಗೂ ರೈತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದೇವೆ. ಸಮಯ ಬಂದಾಗ ನಾವು ಜೊತೆಯಾಗಿ ಕೂತು ರೈತರ ವಿಚಾರವನ್ನು ಮಾತನಾಡುತ್ತೇವೆ," ಎಂದು ತಿಳಿಸಿದರು.

"ನಮ್ಮ ಮುಖ್ಯ ಸಿದ್ಧಾಂತ ರಾಷ್ಟ್ರೀಯತೆ ಹಾಗೂ ರಾಷ್ಟ್ರವನ್ನು ಎಂದಿಗೂ ಮೊದಲ ಸ್ಥಾನದಲ್ಲಿ ಇರಿಸುವುದಕ್ಕೆ ನಾವು ಆಧ್ಯತೆ ನೀಡುತ್ತೇವೆ. ಈ ಸಿದ್ಧಾಂತದ ಪ್ರಕಾರವಾಗಿ ನಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳಲು ಯಾರು ಸಿದ್ಧವಾಗಿದ್ದರೋ ಅವರಿಗೆ ಸ್ವಾಗತ," ಎಂದರು.

"ಅಮರೀಂದರ್‌ ಸಿಂಗ್‌ ಈ ಹಿಂದೆ ಯೋಧರಾಗಿದ್ದರು. ರಾಷ್ಟ್ರದ ಹಿತಾಸಕ್ತಿಯ ಬಗ್ಗೆ ಸಿಂಗ್‌ರ ಚಿಂತನೆ ಮೆಚ್ಚುವಂತದ್ದು," ಎಂದು ಹೇಳಿದ ಪಂಜಾಬ್‌ ಬಿಜೆಪಿ ಉಸ್ತುವಾರಿ ದುಷ್ಯಂತ್‌ ಗೌತಮ್‌, ಇನ್ನು ಕೂಡಾ ಅಮರೀಂದರ್‌ ಸಿಂಗ್‌ರ ಹೊಸ ಪಕ್ಷ ರಚನೆ ಆಗಿಲ್ಲ. ಹಾಗಾಗಿ ಎಲ್ಲವನ್ನೂ ಈಗಲೇ ನಿರ್ಧಾರ ಮಾಡಲು ಸಾಧ್ಯವಿಲ್ಲ ಎಂದು ಕೂಡಾ ಉಲ್ಲೇಖ ಮಾಡದ್ದಾರೆ.

ಮಾಜಿ ಮುಖ್ಯಮಂತ್ರಿಯಾಗಿದ್ದ ಅಮರೀಂದರ್‌ ಸಿಂಗ್‌ ಹೊಸ ಪಕ್ಷವನ್ನು ಸ್ಥಾಪನೆ ಬಗ್ಗೆ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಸರಣಿ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. "ಪಂಜಾಬ್‌ನ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟವು ಈಗಲೂ ಮುಂದುವರಿದಿದೆ. ಒಂದು ವರ್ಷದಿಂದ ತಮ್ಮ ಉಳಿವಿಗಾಗಿ ಹೋರಾಡುತ್ತಿರುವ ನಮ್ಮ ರೈತರು ಸೇರಿದಂತೆ ಪಂಜಾಬ್ ಮತ್ತು ಅದರ ಜನರ ಹಿತಾಸಕ್ತಿಗಾಗಿ ನನ್ನದೇ ರಾಜಕೀಯ ಪಕ್ಷವನ್ನು ಆರಂಭಿಸುವ ಬಗ್ಗೆ ಶೀಘ್ರದಲ್ಲೇ ಘೋಷಣೆ ಮಾಡುತ್ತೇನೆ," ಎಂದು ಅಮರೀಂದರ್‌ ಹೇಳಿಕೆಯನ್ನು ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್‌ ಮಾಡಿದ್ದಾರೆ.

"ರೈತರ ಪ್ರತಿಭಟನೆಯು ರೈತರ ಪರವಾದ ನಿರ್ಧಾರದ ಬಳಿಕ ಅಂತ್ಯವಾದರೆ ಮುಂದಿನ 2022 ರ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು," ಎಂದು ಇದೇ ಸಂದರ್ಭದಲ್ಲಿ ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ "ಅದೇ ರೀತಿಯ ಸಿದ್ಧಾಂತವನ್ನು ಹೊಂದಿರುವ ಅಕಾಳಿದಳದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದೆ ತೀರ್ಮಾನಿಸಲಾಗುತ್ತದೆ. ವಿಶೇಷವಾಗಿ ದಿಂಡಾಸ ಮತ್ತು ಬ್ರಹ್ಮಪುರ ಬಣಗಳೊಂದಿಗೆ," ಎಂದು ಇನ್ನೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

"ನನ್ನ ರಾಜ್ಯ ಹಾಗೂ ನನ್ನ ಜನರ ಭವಿಷ್ಯವನ್ನು ಸುರಕ್ಷತೆಗೊಳಿಸುವವರೆಗೂ ನಾನು ವಿರಾಮ ಪಡೆಯಲಾರೆ. ಪಂಜಾಬ್‌ಗೆ ರಾಜಕೀಯ ಸ್ಥಿರತೆಯ ಅಗತ್ಯವಿದೆ. ಹಾಗೆಯೇ ಆಂತರಿಕ ಹಾಗೂ ಬಾಹ್ಯ ಬೆದರಿಕೆಯಿಂದ ಸುರಕ್ಷತೆ ಅಗತ್ಯವಿದೆ. ಇಂದು ಅಪಾಯದಲ್ಲಿರುವ ಜನರ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತೇನೆ ಎಂದು ನಾನು ಈ ಮೂಲಕ ಜನರಿಗೆ ಭರವಸೆಯನ್ನು ನೀಡುತ್ತೇನೆ," ಎಂಬ ಅಮರೀಂದರ್‌ ಸಿಂಗ್‌ ಹೇಳಿಕೆಯನ್ನು ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್ ಮಾಡಿದ್ದಾರೆ.

(ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+