ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಸಮೀಕ್ಷೆ
ಚಂಡೀಗಢ, ಜನವರಿ 20: ಪಂಜಾಬ್ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಆಮ್ ಆದ್ಮಿ ಪಕ್ಷದಂತೆಯೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಮುಂದಾಗಿದೆ.
ಆಮ್ ಆದ್ಮಿ ಪಕ್ಷ ಟೆಲಿವೋಟ್ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ, ಕಾಂಗ್ರೆಸ್ ಸಮೀಕ್ಷೆ ಮೂಲಕ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತರಾಗಿರುವ ನಿಖಿಲ್ ಆಳ್ವಾ, ಟ್ವಿಟ್ಟರ್ ಸಮೀಕ್ಷೆಯಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂದು ಪ್ರಶ್ನೆ ಕೇಳಿದ್ದು, ಸಿಎಂ ಚರಣ್‌ಜೀತ್ ಸಿಂಗ್ ಚನ್ನಿ ಎಂದು ಶೇ.69ರಷ್ಟು ಮತಗಳು ಬಂದಿದ್ದು, ಶೇ.12ರಷ್ಟು ಮತಗಳು ನವಜೋತ್ ಸಿಂಗ್ ಸಿಧು ಎಂದು ಹೇಳುತ್ತಿವೆ.
ಸಮೀಕ್ಷೆಯಲ್ಲಿ ಒಟ್ಟು 1283 ಮಂದಿ ಪಾಲ್ಗೊಂಡಿದ್ದರು. ಪಂಜಾಬ್‌ನಲ್ಲಿ ಯಾರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ಸಾಧ್ಯತೆಗಳಿಲ್ಲ, ಸಾಮೂಹಿಕ ನಾಯಕತ್ವದೊಂದಿಗೆ ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್ ಈಗಾಗಲೇ ಹೇಳಿದೆ.

ಸಮೀಕ್ಷೆ ಕುರಿತು ಆಳ್ವಾ ಪ್ರತಿಕ್ರಿಯೆ ನೀಡಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದ್ದಾರೆ.
117 ಸದಸ್ಯ ಬದಲ ಪಂಜಾಬ್ ವಿಧಾನಸಭೆಗೆ ಫೆಬ್ರವರಿ 20ರಂದು ಚುನಾವಣೆ ನಡೆಯಲಿದೆ, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಈಗಾಗಲೇ ಕೆಲವು ಶಾಸಕರು ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿರನ್ನೇ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ ಎಂದು ಹೈಕಮಾಂಡ್‌ಗೆ ಆಗ್ರಹ ಮಾಡಿದ್ದಾರೆ.
ಆದರೆ ಈ ಬಗ್ಗೆ ಪಕ್ಷ ಮಾತ್ರ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಕೂಡಾ ಈ ಮುಖ್ಯಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ಇದ್ದಾರೆ. ಇನ್ನು ಈ ನಡುವೆ ಈಗಾಗಲೇ ಕಾಂಗ್ರೆಸ್ ಚರಣ್‌ಜೀತ್ ಸಿಂಗ್ ಚನ್ನಿಯೇ ತಮ್ಮ ಮುಂದಿನ ಸಿಎಂ ಅಭ್ಯರ್ಥಿ ಎಂಬಂತೆ ಬಿಂಬಿಸುವ ಕೆಲವು ಕಾರ್ಯಗಳನ್ನು ಮಾಡಿದೆ.
2017 ರ ವಿಧಾನಸಭಾ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತ ಹೆಚ್ಚು ಮತಗಳನ್ನು ಈ ಬಾರಿ ಕಾಂಗ್ರೆಸ್ ಪಡೆಯಲಿದೆ,' ಎಂದು ಕೂಡಾ ಕಾಂಗ್ರೆಸ್ ಪಕ್ಷದ ವಕ್ತಾರ ಹರೀಶ್ ಚೌಧರಿ ಹೇಳಿದ್ದಾರೆ. 'ನವಜೋತ್ ಸಿಂಗ್ ಸಿಧು ಎತ್ತಿರುವ ಪ್ರತಿಯೊಂದು ವಿಷಯವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಪಕ್ಷವು ಸದ್ಯಕ್ಕೆ ನಿರ್ಧರಿಸಿದೆ.
ಪ್ರಸ್ತುತ ಚರಣ್‌ಜೀತ್ ಸಿಂಗ್ ಚನ್ನಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೂ ಹೌದು ರಾಜ್ಯದ ಮುಖ್ಯಮಂತ್ರಿಯೂ ಹೌದು. ಚರಣ್‌ಜೀತ್ ಸಿಂಗ್ ಚನ್ನಿ ಪಂಜಾಬ್‌ನಾದ್ಯಂತ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಾರೆ,' ಎಂದು ತಿಳಿಸಿದ್ದಾರೆ.
ಇದೇ ವರ್ಷದ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮನ್ ಧುರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಕುರಿತು ರಾಘವ್ ಛಡ್ಡಾ ಮಾಹಿತಿ ನೀಡಿದ್ದು, ಪ್ರಸ್ತುತ ಆಡಳಿತ ಪಕ್ಷ ಕಾಂಗ್ರೆಸ್ ಧುರಿ ವಿಧಾನಸಭಾ ಕ್ಷೇತ್ರವನ್ನು ಆಕ್ರಮಿಸಿಕೊಂಡಿದೆ ಹಾಗೆಯೇ ಪಕ್ಷದ ದಲ್ವಿಂದರ್ ಖಂಗುರಾ ಶಾಸಕರಾಗಿದ್ದಾರೆ. ಭಗವಂತ್ ಮನ್ ಅವರು ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಎಎಪಿ ಸಂಸದರಾಗಿದ್ದರು.
117 ಸದಸ್ಯ ಬದಲ ಪಂಜಾಬ್ ವಿಧಾನಸಭೆಗೆ ಫೆಬ್ರವರಿ 20ರಂದು ಚುನಾವಣೆ ನಡೆಯಲಿದೆ, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಪಂಜಾಬ್ ನ ಸಂಗ್ರೂರು ಕ್ಷೇತ್ರದ ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯ ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಇಂದು ಚಂಡೀಗಢದಲ್ಲಿ ಸಾರ್ವಜನಿಕರ ಮುಂದೆ ವೇದಿಕೆಯಲ್ಲಿ ಈ ಘೋಷಣೆ ಮಾಡಿದ ಅವರು, ಪಕ್ಷವು ಇತ್ತೀಚೆಗೆ ಫೋನ್ ಲೈನ್ ಅನ್ನು ತೆರೆದು ಅಭ್ಯರ್ಥಿಯ ಆಯ್ಕೆಯನ್ನು ನೀಡುವಂತೆ ಜನರನ್ನು ಕೇಳಿಕೊಂಡಿದ್ದೆವು. ಜನರ ಅಭಿಪ್ರಾಯ ಸಂಗ್ರಹಿಸಿ ಸಿಕ್ಕಿರುವ ಫಲಿತಾಂಶದಂತೆ ಭಗವಂತ್ ಮನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ತೀರ್ಮಾನಿಸಿದ್ದೇವೆ ಎಂದು ಪ್ರಕಟಿಸಿದರು.
ಭಗವಂತ್ ಮನ್ ಸಂಗ್ರೂರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಕಳೆದ ಎರಡೂ ಚುನಾವಣೆಗಳಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದೀಗ ಶೇ. 93ಕ್ಕೂ ಹೆಚ್ಚು ಜನರು ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ ಹಿನ್ನೆಲೆಯಲ್ಲಿ ಎಎಪಿ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಸ್ಟಾಂಡಪ್ ಕಾಮಿಡಿಯನ್ ಆಗಿದ್ದ ಭಗವಂತ್ ಮನ್ ಹಲವು ಸಿನಿಮಾಗಳಲ್ಲೂ ಹಾಸ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. 2011ರಲ್ಲಿ ಮೊದಲ ಬಾರಿಗೆ ರಾಜಕೀಯದ ಅಂಗಳಕ್ಕೆ ಧುಮುಕಿದ ಅವರು ಮನ್‌ಪ್ರೀತ್ ಸಿಂಗ್ ಬಾದಲ್ ನೇತೃತ್ವದ ಪೀಪಲ್ಸ್ ಪಾರ್ಟಿ ಆಫ್ ಪಂಜಾಬ್ ಸೇರಿದ್ದರು. 2012ರಲ್ಲಿ ಲೆಹ್ರಾ ಕ್ಷೇತ್ರದಿಂದ ಸ್ಪರ್ಧಿಸಿದ ಮನ್ ಮೊದಲ ಯತ್ನದಲ್ಲೇ ಸೋಲು ಕಂಡಿದ್ದರು.












Click it and Unblock the Notifications