Breaking: ಗಾಯಕ ಸಿಧು ಮೂಸೆವಾಲಾ ಹತ್ಯೆಯ ಆರೋಪಿಗೆ ಗುಂಡೇಟು
ಚಂಢಿಗಡ, ಜುಲೈ 20: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ಗ್ಯಾಂಗ್‌ಸ್ಟಾರ್ ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಶೂಟೌಟ್‌ನಲ್ಲಿ ತೊಡಗಿದ್ದ ಇತರ ಶಂಕಿತ ಆರೋಪಿ ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾಗೆ ಏನಾಯಿತು ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ.
ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರ ಗ್ಯಾಂಗ್‌ಸ್ಟರ್ ವಿರೋಧಿ ಟಾಸ್ಕ್ ಫೋರ್ಸ್ ಇಬ್ಬರು ವ್ಯಕ್ತಿಗಳನ್ನು ಹಿಂಬಾಲಿಸುತ್ತಿದ್ದರಿಂದ ಗುಂಡಿನ ಚಕಮಕಿ ನಡೆದಿದೆ. ಮೂವರು ಶೂಟರ್‌ಗಳಲ್ಲಿ ಈ ಇಬ್ಬರು ಓಡಿಹೋಗಿದ್ದರು.

ಮೂರು ಆಂಬ್ಯುಲೆನ್ಸ್‌ಗಳು ಅಮೃತಸರ ಸಮೀಪದ ಭಕ್ನಾ ಗ್ರಾಮವನ್ನು ತಲುಪಿದ್ದು, ಅಲ್ಲಿ ಪೊಲೀಸರು ಮತ್ತು ಗಾಯಕ ಸಿಧು ಮೂಸ್ ವಾಲಾ ಅವರ ಇಬ್ಬರು ಶಂಕಿತ ಹಂತಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಮತ್ತು ಜನರು ಮನೆಯೊಳಗೆ ಇರಲು ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮನ್ನು ಕುಸ್ಸಾ ಎಕೆ-47 ರೈಫಲ್‌ನಿಂದ ಗಾಯಕ ಮೂಸೆವಾಲಾಗೆ ಮೊದಲ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಇವರಿಬ್ಬರು ಇದ್ದರು. ಆದರೆ, ಮೂರನೆಯ ಪ್ರಮುಖ ಆರೋಪಿ ದೀಪಕ್ ಮುಂಡಿ ಇನ್ನೂ ಪತ್ತೆಯಾಗಿಲ್ಲ. ಉಳಿದ ಎಂಟು ಶೂಟರ್‌ಗಳನ್ನು ಬಂಧಿಸಲಾಗಿದೆ.
ಗಾಯಕ, ಗೀತರಚನೆಕಾರ ಮತ್ತು ರಾಪರ್ ಮಾತ್ರವಲ್ಲದೆ ಕಾಂಗ್ರೆಸ್ ನಾಯಕರಾಗಿದ್ದ 28 ವರ್ಷದ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಮೇ 29 ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಂಜಾಬ್‌ನ ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಸರ್ಕಾರ ಸರ್ಕಾರವು ಸಿಧು ಮೂಸೆವಾಲಾ ಅವರ ಭದ್ರತೆಯನ್ನು ಕೇವಲ ಇಬ್ಬರು ಪೊಲೀಸರಿಗೆ ಕಡಿತಗೊಳಿಸಿದ ಕೇವಲ ಒಂದು ದಿನದ ನಂತರ ಕೊಲೆ ನಡೆದಿದೆ.

ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಅವರ ಸಹಕಾರದೊಂದಿಗೆ ಕೆನಡಾ ಮೂಲದ ಸತೀಂದರ್ಜಿತ್ ಸಿಂಗ್, ಅಲಿಯಾಸ್ ಗೋಲ್ಡಿ ಬ್ರಾರ್ ಈ ಕೊಲೆಯನ್ನು ಮಾಡಿಸಿದ್ದಾರೆ ಎಂದು ಹೇಳಲಾಗಿದೆ.
ಗೋಲ್ಡಿ ಬ್ರಾರ್ ಫೇಸ್‌ಬುಕ್ ಪೋಸ್ಟ್‌ಗಳ ಮೂಲಕ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ವರ್ಷ ಅಕಾಲಿ ನಾಯಕ ವಿಕ್ಕಿ ಮಿದ್ದುಖೇರಾ ಹತ್ಯೆಗೆ ಪ್ರತೀಕಾರ ಇದು ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ತಿಳಿಸಿವೆ.
ಪಂಜಾಬ್‌ನ ಫರೀದ್‌ಕೋಟ್‌ನಲ್ಲಿ ದಾಖಲಾದ ಇತರ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟಾರ್ ಗೋಲ್ಡಿ ಬ್ರಾರ್ ಅವರನ್ನು ಪತ್ತೆಹಚ್ಚಲು ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.












Click it and Unblock the Notifications