Breaking: ನಟಿ ಸೋನಾಲಿ ಫೋಗಟ್ ಸಾವು, ಸಿಬಿಐ ತನಿಖೆಗೆ ಒತ್ತಾಯ
ಚಂಡೀಗಢ, ಆಗಸ್ಟ್ 24: ಮಂಗಳವಾರ ನಿಧನರಾದ ಹರ್ಯಾಣದ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಅವರ ಕುಟುಂಬ ಆಕೆಯ ಸಾವಿನ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದೆ.
42 ವರ್ಷದ ಸೋನಾಲಿ ಫೋಗಟ್ ಮಂಗಳವಾರ ಮುಂಜಾನೆ ಗೋವಾದಲ್ಲಿ ಶಂಕಿತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸರು "ಅಸಹಜ ಸಾವು" ಎಂದು ಪ್ರಕರಣ ದಾಖಲಿಸಿದ್ದಾರೆ.
ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬುದನ್ನು ಆಕೆಯ ಕುಟುಂಬ ಒಪ್ಪಿಕೊಳ್ಳಲಿಲ್ಲ ಎಂದು ಆಕೆಯ ಸಹೋದರಿ ಹೇಳಿದ್ದಾರೆ. ಸೋನಾಲಿ ಫೋಗಟ್ ಫೋನ್‌ನಲ್ಲಿ "ಏನೋ ಅಳವಡಿಸಿದ್ದಾರೆ" ಎಂದು ಕುಟುಂಬದವರು ಆರೋಪಿಸಿದ್ದಾರೆ.

"ನನ್ನ ಸಹೋದರಿಗೆ ಹೃದಯಾಘಾತವಾಗುವುದಿಲ್ಲ. ಅವರು ತುಂಬಾ ಫಿಟ್ ಆಗಿದ್ದರು. ಸಿಬಿಐನಿಂದ ಸೂಕ್ತ ತನಿಖೆ ನಡೆಸುವಂತೆ ನಾವು ಒತ್ತಾಯಿಸುತ್ತೇವೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬುದನ್ನು ನನ್ನ ಕುಟುಂಬ ಒಪ್ಪಿಕೊಳ್ಳಲು ಸಿದ್ಧರಿಲ್ಲ. ಅವರಿಗೆ ಅಂತಹ ಯಾವುದೇ ವೈದ್ಯಕೀಯ ಸಮಸ್ಯೆ ಇರಲಿಲ್ಲ" ಎಂದು ಆಕೆಯ ಸಹೋದರಿ ರಾಮನ್ ತಿಳಿಸಿದ್ದಾರೆ.
"ಆಕೆಯ ಸಾವಿನ ಹಿಂದಿನ ಸಂಜೆ ನನಗೆ ಆಕೆ ಕರೆ ಮಾಡಿದ್ದರು. ವಾಟ್ಸಾಪ್‌ನಲ್ಲಿ ಮಾತನಾಡೋಣ, ಏನೋ ಅನುಮಾನಸ್ಪದವಾಗಿರುವಂತಹದ್ದು ನಡೆಯುತ್ತಿದೆ ಎಂದು ಹೇಳಿದ್ದು. ನಂತರ, ಆಕೆ ಕರೆಯನ್ನು ಕಟ್ ಮಾಡಿದರು, ನಾನು ಕರೆ ಮಾಡಿದರೆ ಸ್ವೀಕರಿಸಲಿಲ್ಲ" ಎಂದು ತಿಳಿಸಿದ್ದಾರೆ.
ಇನ್ನು ಗೋವಾ ಪೊಲೀಸರು ಮರಣೋತ್ತರ ಪರೀಕ್ಷೆಯು ಕಾರಣವನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

ಸೋನಾಲಿ ಫೋಗಟ್ ತನ್ನ ಟಿಕ್‌ಟಾಕ್ ವಿಡಿಯೋಗಳಿಂದ ಹೆಚ್ಚು ಪ್ರಚಾರ ಗಳಿಸಿದ್ದರು. ಬಿಜೆಪಿಗೆ ಸೇರುವ ಮೊದಲು ಅವರು 2006 ರಲ್ಲಿ ಟಿವಿ ನಿರೂಪಕಿಯಾಗಿ ಟೆಲಿವಿಷನ್ ಲೋಕಕ್ಕೆ ಪಾದಾರ್ಪಣೆ ಮಾಡಿದರು. ರಿಯಾಲಿಟಿ ಶೋ ಬಿಗ್ ಬಾಸ್ 2020 ರ 14 ನೇ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದರು. 2016 ರಲ್ಲಿ ಟಿವಿ ಶೋ ಮೂಲಕ ತಮ್ಮ ನಟನೆಗೆ ಪಾದಾರ್ಪಣೆ ಮಾಡಿದ್ದರು. 2019 ರಲ್ಲಿ ವೆಬ್ ಸರಣಿಯಲ್ಲಿ ನಟಿಸಿದರು. ಅವರು ರಿಯಾಲಿಟಿ ಶೋ ಬಿಗ್ ಬಾಸ್‌ನ 2020 ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
ಅವರು 2008 ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿಯ ಮಲಿಹಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಹರಿಯಾಣ, ದೆಹಲಿ ಮತ್ತು ಚಂಡೀಗಢದಂತಹ ಹಲವಾರು ರಾಜ್ಯಗಳಲ್ಲಿ ಪಕ್ಷದ ಬುಡಕಟ್ಟು ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಸೋನಾಲಿ ಫೋಗಟ್ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋತಿದ್ದರು.
ನಟಿ ಸೋನಾಲಿ ಫೋಗಟ್ ತನ್ನ ತಾಯಿಗೆ ಕರೆ ಮಾಡಿ ಆಹಾರ ಸೇವಿಸಿದ ನಂತರ ಹುಷಾರಿಲ್ಲ. ನನ್ನ ವಿರುದ್ಧ ಏನೋ ಪಿತೂರಿ ನಡೆಯುತ್ತಿದೆ ಎಂದು ಹೇಳಿದ್ದಾಳೆ ಎಂದು ಆಕೆಯ ಸಹೋದರಿ ರಾಮನ್ ಹಿಸಾರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸೋನಾಲಿ ಫೋಗಟ್ ಅವರ ಪತಿ ಸಂಜಯ್ ಫೋಗಟ್ ಅವರು 2016 ರಲ್ಲಿ 42 ನೇ ವಯಸ್ಸಿನಲ್ಲಿ ನಿಧನರಾದರು. ಅವರಿಗೆ ಒಬ್ಬ ಮಗಳಿದ್ದಾಳೆ.
ಎರಡು ವರ್ಷಗಳ ಹಿಂದೆ, ಹಿಸಾರ್‌ನಲ್ಲಿ ಸೋನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿ ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ಬಿಜೆಪಿಗೆ ಸೇರ್ಪಡೆಗೊಂಡು, ಕಳೆದ ತಿಂಗಳು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಉಪಚುನಾವಣೆಯಲ್ಲಿ ಆದಂಪುರದಿಂದ ಸೋನಾಲಿ ಫೋಗಟ್ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳಿದ್ದವು. ಇದರ ನಡುವೆ ಬಿಷ್ಣೋಯ್ ಕಳೆದ ವಾರ ಸೋನಾಲಿ ಫೋಗಟ್ ಅವರನ್ನು ಭೇಟಿ ಮಾಡಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications