ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಲೇಜು ಮುಂದೆ ವಿದ್ಯಾರ್ಥಿನಿ ಹತ್ಯೆ ಪ್ರಕರಣ: ಇಬ್ಬರ ಬಂಧನ

|
Google Oneindia Kannada News

ಚಂಡೀಗಢ, ಅಕ್ಟೋಬರ್ 27: ಕಾಲೇಜಿನ ಮುಂದೆ ವಿದ್ಯಾರ್ಥಿನಿಯೊಬ್ಬಳನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದ 21 ವರ್ಷದ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕಾಲೇಜಿನ ಹೊರಗೆ ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿ ಹತ್ಯೆಕಾಲೇಜಿನ ಹೊರಗೆ ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿ ಹತ್ಯೆ

ಸೋಮವಾರ ಮಧ್ಯಾಹ್ನ ಫರಿದಾಬಾದ್​ನ ಬಲ್ಲಬ್ಗರ್​​​ನ ಕಾಲೇಜಿನ ಮುಂದೆ ಈ ಘಟನೆ ನಡೆದಿದ್ದು, ಪರೀಕ್ಷೆ ಬರೆದು ಹೊರ ಬಂದಿದ್ದ ಬಿ.ಕಾಂ ವಿದ್ಯಾರ್ಥಿಯನ್ನು ಕಾರಿನಲ್ಲಿ ಅಪಹರಿಸಲು ಮುಂದಾದಾಗ, ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಪಾಯಿಂಟ್​ ಬ್ಲಾಕ್​ ರೇಂಜ್​ನ ಗನ್ ನಿಂದ ಗುಂಡು ಹಾರಿಸಿ ಭೀಕರ ಹತ್ಯೆ ಮಾಡಲಾಗಿದೆ.

Two Held For Killing Student Infront Of College

ಈ ಘಟನೆಯ ದೃಶ್ಯಗಳು ಇಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿತ್ತು. ಘಟನೆ ಖಂಡಿಸಿ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ವಿದ್ಯಾರ್ಥಿನಿ ಅಂತಿಮ ವರ್ಷದ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ್ದಳು. ಈ ಘಟನೆ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಘಟನೆ ಕುರಿತು ಕ್ರಮ ತೆಗೆದುಕೊಳ್ಳುವಂತೆ ಹರಿಯಾಣ ಪೊಲೀಸರಿಗೆ ಪತ್ರ ಬರೆದಿತ್ತು.

ಪ್ರಕರಣದ ಶೀಘ್ರ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಹೇಳಿದ್ದಾರೆ.ಇನ್ನು ಮುಖ್ಯ ಆರೋಪಿ ತೌಸಿಫ್ ಮತ್ತು ಆತನ ಸಹಚರ ರೆಹಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರನ್ನು ಫರಿದಾಬಾದ್ ಜಿಲ್ಲೆಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿದೆ.

English summary
Police on Tuesday arrested two men for allegedly killing a 21-year-old woman outside her college in Haryana's Ballabhgarh, a murder which triggered protests with students and local residents blocking the road to Sohna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X