ಹೆಚ್ಚಿದ ಕೊರೊನಾ ವೈರಸ್ ಸೋಂಕು; ಚೆನ್ನೈನಲ್ಲಿ ಮತ್ತೆ ಲಾಕ್ ಡೌನ್

ಚೆನ್ನೈ, ಜೂನ್ 19 : ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಲಾಕ್ ಡೌನ್ ಜಾರಿಗೆ ಬಂದಿದೆ. ಚೆನ್ನೈ ನಗರದಲ್ಲಿ ಇದುವರೆಗೂ ದಾಖಲಾದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 38,327.

Recommended Video

      ಪಾಕಿಸ್ತಾನದ ಆರಂಭಿಕ ಆಟಗಾರನಿಗೆ ರೋಹಿತ್ ಶರ್ಮ ರೋಲ್ ಮಾಡೆಲ್ | Rohit Sharma | Oneindia Kannada

      ಚೆನ್ನೈ, ತಿರುವಳ್ಳೂರು, ಕಾಂಚಿಪುರಂ ಮತ್ತು ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಶುಕ್ರವಾರದಿಂದ 12 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

      ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ಘೋಷಣೆ ಮಾಡಿದ್ದರು. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಬಂದ್ ಮಾಡಬೇಕು ಎಂದು ಸೂಚಿಸಿದ್ದರು.

      12 Days Lock Down Begins In Chennai City

      ಚೆನ್ನೈ ನಗರದಲ್ಲಿ ವಾಹನ ಸಂಚಾರ ಸಂಪೂರ್ಣರಾಗಿ ರದ್ದುಗೊಂಡಿದೆ. ನಗರದ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಖಾಸಗಿ ಕಾರು ಮತ್ತು ಬೈಕ್‌ನಲ್ಲಿ ಜನರು 2 ಕಿ. ಮೀ. ತನಕ ಮಾತ್ರ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ.

      ಲಾಕ್ ಡೌನ್ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಚೆನ್ನೈ ಪೊಲೀಸರು ಸೂಚನೆ ನೀಡಿದ್ದಾರೆ. ನಗರದಲ್ಲಿ 288 ಚೆಕ್ ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗಿದ್ದು, ಜನರ ಸಂಚಾರದ ಮೇಲೆ ನಿಗಾ ಇಡಲಾಗಿದೆ.

      12 Days Lock Down Begins In Chennai City

      ಕೆಲವು ರೈಲು, ವಿಮಾನ ಸೇವೆಗೆ ಲಾಕ್ ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗಾಗಿಯೂ ಜನರು ವಾಹನ ಬಳಸದಂತೆ ಪೊಲೀಸರು ಮನವಿ ಮಾಡಿದ್ದಾರೆ. ಅನಗತ್ಯವಾಗಿ ಸಂಚಾರ ನಡೆಸುವ ಜನರ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

      ನಗರದ ಪರಿಸ್ಥಿತಿಯ ವೀಕ್ಷಣೆಗೆ ಪೊಲೀಸರು ಡ್ರೋಣ್ ಕ್ಯಾಮರಾ ಬಳಕೆ ಮಾಡುತ್ತಿದ್ದಾರೆ. ಸರ್ಕಾರಿ ಅಧಿಕಾರಿಗಳು, ಕೋವಿಡ್ - 19 ಕರ್ತವ್ಯದಲ್ಲಿರುವ ಜನರ ಸಂಚಾರಕ್ಕಾಗಿ ಸರ್ಕಾರದಿಂದಲೇ ಬಸ್‌ಗಳನ್ನು ಓಡಿಸಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+