Breaking; ಐಐಟಿ ಮದ್ರಾಸ್‌ನಲ್ಲಿ 12 ಜನರಿಗೆ ಕೋವಿಡ್‌ ಸೋಂಕು

ಚೆನ್ನೈ, ಏಪ್ರಿಲ್ 21; ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ಸಂದರ್ಭದಲ್ಲಿ ಐಐಟಿ ಮದ್ರಾಸ್‌ ಕ್ಯಾಂಪಸ್‌ನಲ್ಲಿ 12 ಜನರಿಗೆ ಕೋವಿಡ್ ಸೋಂಕು ತಗುಲಿದೆ.

ಗುರುವಾರ 12 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಈ ಕುರಿತು ಐಐಟಿ ಮದ್ರಾಸ್‌ನ ಅಧಿಕಾರಿಗಳು ಸಹ ಖಚಿತಪಡಿಸಿದ್ದಾರೆ. ತಮಿಳುನಾಡಿನಲ್ಲಿ ಬುಧವಾರ 31 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು.

ಕೇಂದ್ರ ಆರೋಗ್ಯ ಸಚಿವಾಲಯದ ಗುರವಾರದ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ 2,380 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,433 ಆಗಿದೆ.

12 Tested Positive For Covid 19 At IIT Madras

ಸದ್ಯ ಕೋವಿಡ್ ಸೋಂಕು ತಗುಲಿರುವ 12 ಜನರಿಗೆ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಐಟಿ ಮದ್ರಾಸ್ ಕ್ಯಾಂಪಸ್‌ನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಮತ್ತು ಜ್ವರ ಪತ್ತೆಯಾಗಿತ್ತು. ಬುಧವಾರ ಎಲ್ಲಾ ವಿದ್ಯಾರ್ಥಿಗಳ ಸ್ಯಾಂಪಲ್‌ಗಳನ್ನು ಪಡೆದು ಪರೀಕ್ಷೆಗೆ ಕಳಿಸಲಾಗಿತ್ತು. ಗುರುವಾರ ಈ ಮಾದರಿಗಳ ವರದಿ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+