ತಮಿಳುನಾಡಿನಲ್ಲಿ ಮಳೆಗೆ ಕುಸಿದ ಮೂರು ಮನೆಗಳು: 17 ಮಂದಿ ಸಾವು
ಚೆನ್ನೈ, ಡಿಸೆಂಬರ್ 2: ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೂರು ಮನೆಗಳು ಕುಸಿದಿದ್ದು ಒಟ್ಟು 15 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡಿನ ನಡೂರ್ ಕಣ್ಣಪ್ಪನ್ ಲೇಔಟ್‌ನಲ್ಲಿ ಕಾಂಪೌಂಡ್ ಸೇರಿ ಮೂರು ಮನೆಗಳು ಕುಸಿದಿವೆ. ರಕ್ಷಣಾ ಕಾರ್ಯ ಮುಂದುವರೆದಿದೆ.
ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಕೆಲವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ.

ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications