ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ಮಳೆಗೆ ಕುಸಿದ ಮೂರು ಮನೆಗಳು: 17 ಮಂದಿ ಸಾವು

|
Google Oneindia Kannada News

ಚೆನ್ನೈ, ಡಿಸೆಂಬರ್ 2: ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೂರು ಮನೆಗಳು ಕುಸಿದಿದ್ದು ಒಟ್ಟು 15 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ನಡೂರ್ ಕಣ್ಣಪ್ಪನ್ ಲೇಔಟ್‌ನಲ್ಲಿ ಕಾಂಪೌಂಡ್ ಸೇರಿ ಮೂರು ಮನೆಗಳು ಕುಸಿದಿವೆ. ರಕ್ಷಣಾ ಕಾರ್ಯ ಮುಂದುವರೆದಿದೆ.

ತಮಿಳುನಾಡಲ್ಲಿ ಭಾರಿ ಮಳೆ: ಯಾವ್ಯಾವ ರಾಜ್ಯಗಳಿಗೆ ಕಾದಿದೆ ಆಪತ್ತು?ತಮಿಳುನಾಡಲ್ಲಿ ಭಾರಿ ಮಳೆ: ಯಾವ್ಯಾವ ರಾಜ್ಯಗಳಿಗೆ ಕಾದಿದೆ ಆಪತ್ತು?

ಶಂಕರಭರಣಿ ನದಿ ದಡದ ಊರುಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹೀಗಾಗಿ ಕೆಲವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಭಾಗದಲ್ಲಿ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರನ್ನು ನಿಯೋಜನೆ ಮಾಡಲಾಗಿದೆ.

15 Persons Dead After A Compound Wall Collapsed In Tamil Nadu

ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ತಿರುವಲ್ಲೂರು, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಂಡಿಚೇರಿಯಲ್ಲೂ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

English summary
15 persons dead after a compound wall collapsed and damaged three houses in Nadoor Kannappan Layout in Mettupalayam today morning, following heavy rain in the region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X