ತಮಿಳುನಾಡಿನಲ್ಲಿ ಇಂದು ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆ

ಚೆನ್ನೈ, ಏಪ್ರಿಲ್ 30: ತಮಿಳುನಾಡಿನಲ್ಲಿ ಇಂದು ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 161 ಹೊಸ ಕೊರೊನಾ ಪಾಸಿಟಿವ್ ಕೇಸ್‌ಗಳು ಒಂದೇ ದಿನ ಬೆಳಕಿಗೆ ಬಂದಿವೆ.

ಇನ್ನು ಚೆನ್ನೈ ನಗರದಲ್ಲಿ ಇಂದು 138 ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಇದುವರೆಗೆ ಒಂದು ದಿನದಲ್ಲಿ ಪತ್ತೆಯಾದ ಅತಿ ಹೆಚ್ಚಿನ ಸಂಖ್ಯೆಯ ಕೇಸ್ ಇದಾಗಿದೆ. ತಮಿಳುನಾಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2162ಕ್ಕೆ ಏರಿಕೆ ಕಂಡಿದೆ. 1210 ಜನರು ಇದರಲ್ಲಿ ಗುಣಮುಖರಾಗಿದ್ದಾರೆ.

ಭಾರತದಲ್ಲಿ ಇಂದು 1823 ಕೊರೊನಾ ಪಾಸಿಟಿವ್ ಹೊಸ ಪ್ರಕರಣಗಳು ಪತ್ತೆಯಾಗಿವೆ. 67 ಜನರು ಮರಣ ಹೊಂದಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 33,610ಕ್ಕೆ ಏರಿಕೆ ಕಂಡಿದೆ. ಇದುವರೆಗೆ 1,075 ಮಂದಿ ಮೃತರಾಗಿದ್ದಾರೆ. 8,373 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ.

161 Cases Were Reported On Today In Tamil Nadu

ಕರ್ನಾಟಕದಲ್ಲಿ ಕಳೆದ ಒಂದು ದಿನದಲ್ಲಿ ರಾಜ್ಯದಲ್ಲಿ 30 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕರ್ನಾಟಕದಲ್ಲಿ ಈಗ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+