ತಮಿಳುನಾಡಿನಲ್ಲಿ ಒಂದೇ ದಿನ 3940 ಮಂದಿಗೆ ಕೊರೊನಾವೈರಸ್ ಪಾಸಿಟಿವ್
ಚೆನ್ನೈ, ಜೂನ್.28: ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಏರಿಕೆ ಕಂಡು ಬರುತ್ತಿದೆ. ಮಹಾಮಾರಿಯ ಅಟ್ಟಹಾಸಕ್ಕೆ ಜನರು ಆತಂಕದಲ್ಲೇ ಕಾಲ ಕಳೆಯುವಂತಾ ವಾತಾವರಣ ಸೃಷ್ಟಿಯಾಗಿದೆ.
ಕಳೆದ 24 ಗಂಟೆಗಳಲ್ಲೇ 3,940 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವರದಿಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 82,275ಕ್ಕೆ ಏರಿಕೆಯಾಗಿದೆ.
ಲಾಕ್‌ಡೌನ್ ಇದ್ದರೂ ತಮಿಳುನಾಡಿನಲ್ಲಿ ಕೊರೊನಾ ರಣಕೇಕೆ, ಒಂದೇ ದಿನ 3645 ಕೇಸ್
ರಾಜ್ಯದಲ್ಲಿ ಇದುವರೆಗೂ 45,537 ಮಂದಿ ಕೊರೊನಾವೈವರಸ್ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 35,656 ಕೊರೊನಾವೈರಸ್ ಸೋಂಕಿತ ಸಕ್ರಿಯ ಪ್ರಕರಣಗಳಿವೆ.

ತಮಿಳುನಾಡಿನಲ್ಲಿ ಒಂದೇ ದಿನ 54 ಮಂದಿ ಸಾವು:
ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಮಹಾಮಾರಿಗೆ ಕಳೆದ 24 ಗಂಟೆಗಳಲ್ಲಿ 54 ಮಂದಿ ಉಸಿರು ಚೆಲ್ಲಿದ್ದಾರೆ. ಇದರಿಂದ ರಾಜ್ಯದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆಯು ಬರೋಬ್ಬರಿ 1079ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಶನಿವಾರ ಕೂಡಾ ಸಾವಿರಾರು ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ಒಂದೇ ದಿನ 3,645 ಜನರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿತ್ತು.












Click it and Unblock the Notifications