ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು; ಕೆಲವು ನಗರದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ

|
Google Oneindia Kannada News

ಚೆನ್ನೈ, ಏಪ್ರಿಲ್ 29 : ತಮಿಳುನಾಡು ಸರ್ಕಾರ ಲಾಕ್ ಡೌನ್ ನಿಯಮದಲ್ಲಿ ಕೆಲವು ಬದಲಾವಣೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ 2058 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, 25 ಜನರು ಮೃತಪಟ್ಟಿದ್ದಾರೆ.

ಬುಧವಾರ ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಬಳಿಕ ಕೆಲವು ನಗರಗಳಲ್ಲಿ ನಿಯಮ ಬದಲಾವಣೆಗೆ ಸೂಚಿಸಿದರು.

ಬೆಂಗಳೂರು, ಚೆನ್ನೈ, ಮೈಸೂರು ಮಾರ್ಗದಲ್ಲಿ ಬುಲೆಟ್ ರೈಲು ಬೆಂಗಳೂರು, ಚೆನ್ನೈ, ಮೈಸೂರು ಮಾರ್ಗದಲ್ಲಿ ಬುಲೆಟ್ ರೈಲು

ಚೆನ್ನೈ, ಕೊಯಂಬತ್ತೂರು ಮತ್ತು ಮಧುರೈನಲ್ಲಿ ಏಪ್ರಿಲ್ 30ರಂದು ಅಂಗಡಿಗಳು ಬೆಳಗ್ಗೆ 6 ರಿಂದ ಸಂಜೆ 5 ಗಂಟೆ ತನಕ ತೆರೆದಿರಲು ಅವಕಾಶ ನೀಡಲಾಗಿದೆ. ಅಗತ್ಯ ವಸ್ತು, ತರಕಾರಿ, ಹಣ್ಣಿನ ಅಂಗಡಿ ಮಾತ್ರ ತೆರೆಯಬಹುದು.

ಚಾಮರಾಜನಗರ ಸಕ್ಕರೆ ಕಾರ್ಖಾನೆಗೆ ತಮಿಳುನಾಡು ಕಾರ್ಮಿಕರುಚಾಮರಾಜನಗರ ಸಕ್ಕರೆ ಕಾರ್ಖಾನೆಗೆ ತಮಿಳುನಾಡು ಕಾರ್ಮಿಕರು

Lockdown Relaxation In Chennai Coimbatore And Madurai

ಆದೆರೆ, ಮೇ 1ರಿಂದ ಅಂಗಡಿಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯ ತನಕ ಮಾತ್ರ ತೆರೆದಿರುತ್ತವೆ. "ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಗುಂಪು ಸೇರಬಾರದು" ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

ಮೃತದೇಹವಿರುವ ಕೋಣೆಯಲ್ಲೇ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಮೃತದೇಹವಿರುವ ಕೋಣೆಯಲ್ಲೇ ಕೊರೊನಾ ಸೋಂಕಿತರಿಗೆ ಚಿಕಿತ್ಸೆ

ಮೇ 3ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ರಾಜ್ಯ ಸರ್ಕಾರ ಇನ್ನೂ ತೀರ್ಮಾನವನ್ನು ಕೈಗೊಂಡಿಲ್ಲ ಅಂತರರಾಜ್ಯದ ಗಡಿಗಳನ್ನು ಬಂದ್ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸಾರಿಗೆ ವ್ಯವಸ್ಥೆಯನ್ನು ಪುನಃ ಆರಂಭಿಸುವ ಸಾಧ್ಯತೆ ಕಡಿಮೆ ಇದೆ.

ರಾಜ್ಯದಲ್ಲಿ ಇದುವರೆಗೂ 2058 ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿದೆ. ಇದರಲ್ಲಿ ಚೆನ್ನೈನಲ್ಲಿ 678 ಪ್ರಕರಗಳಿವೆ. ಕೊಯಂತ್ತೂರಿನಲ್ಲಿ 141 ಪ್ರಕರಣ, ಮಧುರೈನಲ್ಲಿ 79 ಪ್ರಕರಣಗಳು ವರದಿಯಾಗಿವೆ.

English summary
Tamil Nadu Chief Minister Edappadi Palaniswami announced some relaxation in lockdown rules in Chennai, Ciombatore and Madurai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X