ತಮಿಳುನಾಡಿನ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಪೋಟ: 4 ಸಾವು
ಚೆನ್ನೈ, ಜುಲೈ 1: ತಮಿಳುನಾಡಿನ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, 4 ಮಂದಿ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ತಮಿಳುನಾಡಿನ ಕುಡ್ಡಲೂರ್ ಜಿಲ್ಲೆಯಲ್ಲಿರುವ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಘಟನೆ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೈವೇಲಿಯಲ್ಲಿರುವ ಲಿಗ್ನೈಟ್ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಸ್ಥಾವರದಲ್ಲಿ ಸಿಲುಕಿಕೊಂಡಿದ್ದಾರೆ.
ಉಷ್ಣ ಸ್ಥಾವರದ ಐದನೇ ಘಟಕ((210 MW x 7)ಘಟಕದಲ್ಲಿ ಸ್ಫೋಟವಾಗಿದೆ. ಎರಡು ತಿಂಗಳ ಹಿಂದಷ್ಟೇ ಇದೇ ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.












Click it and Unblock the Notifications