ತಮಿಳುನಾಡಿನಲ್ಲಿ ಒಂದೇ ದಿನದಲ್ಲಿ 4979 ಜನರಿಗೆ ಕೊರೊನಾವೈರಸ್ ಸೋಂಕು
ಚೆನ್ನೈ, ಜುಲೈ.19: ನೊವೆಲ್ ಕೊರೊನಾವೈರಸ್ ಸೋಂಕಿನ ಹರಡುವಿಕೆಯ ಹೊಡೆತಕ್ಕೆ ದಕ್ಷಿಣ ಭಾರತವೂ ಕೂಡಾ ತತ್ತರಿಸಿ ಹೋಗಿದೆ. ದೇಶದಲ್ಲೇ ಅತಿಹೆಚ್ಚು ಸೋಂಕಿತ ಪ್ರಕರಣಗಳು ದಕ್ಷಿಣ ಭಾರತದಲ್ಲೇ ವರದಿಯಾಗುತ್ತಿವೆ.
ಭಾನುವಾರ ಕೂಡಾ ದಾಖಲೆ ಪ್ರಮಾಣದಲ್ಲಿ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿವೆ. ತಮಿಳುನಾಡಿನಲ್ಲಿ ಒಂದೇ ದಿನ 4979 ಜನರಿೆ ಕೊರೊನಾವರ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯು 1,70,693ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ ರಾಜ್ಯದಲ್ಲಿ 78 ಜನರು ಪ್ರಾಣ ಬಿಟ್ಟಿದ್ದಾರೆ. ಇದರಿಂದ ತಮಿಳುನಾಡಿನಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾಾದವರ ಸಂಖ್ಯೆಯು 2481ಕ್ಕೆ ಏರಿಕೆಯಾಗಿದೆ. ಇನ್ನು, 50,294 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಅಂಕಿ-ಸಂಖ್ಯೆ:
ಕೊರೊನಾವೈರಸ್ ಮಹಾಸ್ಫೋಟಕ್ಕೆ ಭಾರತದಲ್ಲಿನ ಚಿತ್ರಣವೇ ಬದಲಾದಂತೆ ತೋರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ ಮೊಟ್ಟಮೊದಲ ಬಾರಿಗೆ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನದಲ್ಲಿ 38,902 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ ಈಗಾಗಲೇ 10,77,618ಕ್ಕೆ ಏರಿಕೆಯಾಗಿದೆ. ಈ ಪೈಕಿ 6,77,423 ಸೋಂಕಿತರು ಗುಣಮುಖರಾಗಿದ್ದು, 3,73,379 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಮಹಾಮಾರಿಗೆ 543 ಮಂದಿ ಪ್ರಾಣ ಬಿಟ್ಟಿದ್ದು, ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 26,816ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಇನ್ನು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,58,127 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದ್ದು, ಇದುವರೆಗೂ 1,37,91,869 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.












Click it and Unblock the Notifications