ತಮಿಳುನಾಡು ಮಂದಿಗೆ ಖುಷಿ ಕೊಡುವ ಕೊವಿಡ್-19 ಅಂಕಿ-ಸಂಖ್ಯೆ!
ಚೆನ್ನೈ, ಆಗಸ್ಟ್.04: ತಮಿಳುನಾಡಿನಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಒಂದು ಕಡೆಯಲ್ಲೇ ಏರಿಕೆಯಾಗುತ್ತಿದೆ. ಇದರ ಜೊತೆಗೆ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗುತ್ತಿರುವುದು ಹೊಸ ಆಶಾಭಾವನೆಯನ್ನು ಹುಟ್ಟು ಹಾಕಿದೆ.
Recommended Video
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5063 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಿಳುನಾಡಿನಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 268285ಕ್ಕೆ ಏರಿಕೆಯಾಗಿದೆ.
ತಮಿಳುನಾಡು ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಒಂದೇ ದಿನ ರಾಜ್ಯದಲ್ಲಿ 6501 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟು 268285 ಸೋಂಕಿತ ಪ್ರಕರಣಗಳಲ್ಲಿ 208784 ಸೋಂಕಿತರು ಗುಣಮಖರಾಗಿದ್ದು, ರಾಜ್ಯದಲ್ಲಿ 55152 ಸಕ್ರಿಯ ಪ್ರಕರಣಗಳಿವೆ.

ಒಂದೇ ದಿನ ಮಹಾಮಾರಿಗೆ 108 ಮಂದಿ ಸಾವು:
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಗುಣಮುಖರ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ನಿರಾಳವಾಗಿ ಇರುವಂತೆಯೂ ಇಲ್ಲ. ಏಕೆಂದರೆ ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 108 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಇದುವರೆಗೂ ಮಹಾಮಾರಿಯಿಂದ ಸಾವಿನ ಮನೆ ಸೇರಿದವರ ಸಂಖ್ಯೆಯು 4349ಕ್ಕೆ ಏರಿಕೆಯಾಗಿದೆ.












Click it and Unblock the Notifications