• search
 • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡಿನಲ್ಲಿ ಒಂದೇ ದಿನ ಕೊರೊನಾವೈರಸ್ ನಿಂದ 112 ಮಂದಿ ಸಾವು

|
Google Oneindia Kannada News

ಚೆನ್ನೈ, ಆಗಸ್ಟ್.05: ಉತ್ತರ ಭಾರತದ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಹರಡುವಿಕೆ ಪ್ರಮಾಣವು ಕೊಂಚ ತಗ್ಗುತ್ತಿದೆ. ಆದರೆ ದಕ್ಷಿಣದ ಭಾರತದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಜನರಲ್ಲಿ ನಡುಕ ಹುಟ್ಟಿಸುವಂತಿದೆ.

   Kabini Reservoir ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ | Oneindia Kannada

   ತಮಿಳುನಾಡಿನಲ್ಲೂ ಪ್ರತಿನಿತ್ಯ ಸಾವಿರಾರು ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 5175 ಮಂದಿಗೆ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆಯು 273460ಕ್ಕೆ ಏರಿಕೆಯಾಗಿದೆ.

   ಕೊರೊನಾವೈರಸ್ ಭೀತಿ ನಡುವೆಯೂ ಭಾರತದ ಈ ರಾಜ್ಯಗಳು ಸೇಫ್!ಕೊರೊನಾವೈರಸ್ ಭೀತಿ ನಡುವೆಯೂ ಭಾರತದ ಈ ರಾಜ್ಯಗಳು ಸೇಫ್!

   ರಾಜ್ಯದಲ್ಲಿ ದಾಖಲಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ತಮಿಳುನಾಡಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ. ಅದರಲ್ಲಿ ಒಟ್ಟು 273460 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 214815 ಸೋಂಕಿತರು ಗುಣಮುಖರಾಗಿದ್ದಾರೆ.

   ರಾಜ್ಯದಲ್ಲಿ ಒಂದೇ ದಿನ 112 ಮಂದಿ ಸಾವು:

   ತಮಿಳುನಾಡಿನಲ್ಲಿ ಕೊರೊನಾವೈರಸ್ ಮಹಾಮಾರಿಗೆ 112 ಮಂದಿ ಪ್ರಾಣ ಬಿಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆಯು 4461ಕ್ಕೆ ಏರಿಕೆಯಾಗಿದೆ. 54184 ಕೊರೊನಾವೈರಸ್ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

   ದೇಶದಲ್ಲಿ ಕೊವಿಡ್-19 ಪ್ರಕರಣ ಮತ್ತು ತಪಾಸಣೆ ಪ್ರಮಾಣ:

   ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 19 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ ದೇಶದಲ್ಲಿ 52509 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 857 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 39795ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ಏರಿಕೆಯಾಗಿದ್ದು, ಈ ಪೈಕಿ 12,82,216 ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ 5,86,244 ಸಕ್ರಿಯ ಪ್ರಕರಣಗಳಿವೆ. ಇದುವರೆದೂ ದೇಶದಲ್ಲಿ 2,14,84,402 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.

   English summary
   5175 New Coronavirus Cases Reported in Tamil Nadu Today, State Tally Rise to 273460.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X