ತಮಿಳುನಾಡಿನಲ್ಲಿ ಒಂದೇ ದಿನ 5609 ಮಂದಿಗೆ ಕೊರೊನಾವೈರಸ್!
ಚೆನ್ನೈ, ಆಗಸ್ಟ್.03: ದಕ್ಷಿಣ ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣವು ಎಂದಿನಂತೆ ಮುಂದುವರಿದಿದೆ. ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲೇ 5609 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.
Recommended Video
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 263222ಕ್ಕೆ ಏರಿಕೆಯಾಗಿದೆ.
ತಮಿಳುನಾಡಿನಲ್ಲಿ ಒಂದೇ ದಿನ 5800 ಮಂದಿ ನೊವೆಲ್ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ ರಾಜ್ಯದಲ್ಲಿ 202283 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಮಹಾಮಾರಿಗೆ 24 ಗಂಟೆಗಳಲ್ಲೇ 109 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 4241ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ಭಾರತದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಯಥಾವತ್ತಾಗಿ ಏರಿಕೆಯಾಗುತ್ತಿದೆ. ಸೋಮವಾರದ ರಾತ್ರಿ ವೇಳೆಗೆ ದೇಶದಲ್ಲಿ 47,454 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 18,52,156ಕ್ಕೆ ಏರಿಕೆಯಾಗಿದೆ. 808 ಮಂದಿ ಕೊರೊನಾವೈರಸ್ ನಿಂದ ಪ್ರಾಣ ಬಿಟ್ಟಿದ್ದರೆ, ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 38,969ಕ್ಕೆ ಹೆಚ್ಚಿದೆ.
ಭಾರತದಲ್ಲಿನ ಒಟ್ಟು 18,52,156 ಕೊವಿಡ್-19 ಸೋಂಕಿತ ಪ್ರಕರಣಗಳ ಪೈಕಿ 12,29,171 ಸೋಂಕಿತರಿಗೆ ನೀಡಿದ ಚಿಕಿತ್ಸೆ ಫಲಿಸಿದ್ದು, ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 5,84,016 ಸಕ್ರಿಯ ಕೊವಿಡ್-19 ಪ್ರಕರಣಗಳಿವೆ.












Click it and Unblock the Notifications