ತಮಿಳುನಾಡಲ್ಲಿ ಒಂದೇ ದಿನ ಕೊರೊನಾವೈರಸ್ ನಿಂದ 98 ಮಂದಿ ಸಾವು
ಚೆನ್ನೈ, ಆಗಸ್ಟ್.02: ಉತ್ತರ ಭಾರತದ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಹರಡುವಿಕೆ ಪ್ರಮಾಣವು ಕೊಂಚ ತಗ್ಗುತ್ತಿದೆ. ಆದರೆ ದಕ್ಷಿಣದ ಭಾರತದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಜನರಲ್ಲಿ ನಡುಕ ಹುಟ್ಟಿಸುವಂತಿದೆ.
ತಮಿಳುನಾಡಿನಲ್ಲೂ ಪ್ರತಿನಿತ್ಯ ಸಾವಿರಾರು ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 5875 ಮಂದಿಗೆ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆಯು 257613ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ದಾಖಲಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ತಮಿಳುನಾಡಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ. ಅದರಲ್ಲಿ ಒಟ್ಟು 257613 ಕೊರೊನಾವೈರ್ ಸೋಂಕಿತ ಪ್ರಕರಣಗಳ ಪೈಕಿ 196483 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಒಂದೇ ದಿನ 5517 ಮಂದಿ ಗುಣಮುಖ:
ತಮಿಳುನಾಡಿನಲ್ಲಿ ಒಂದೇ ದಿನ 5517 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ 98 ಮಂದಿ ಪ್ರಾಣ ಬಿಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆಯು 4132ಕ್ಕೆ ಏರಿಕೆಯಾಗಿದೆ. 56998 ಕೊರೊರನಾವೈರಸ್ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 60344 ಜನರ ರಕ್ತ ಮತ್ತು ಗಂಟಲು ಮಾದರಿಯನ್ನು ಸಂಗ್ರಹಿಸಿದ್ದು ಕೊರೊನಾವೈರಸ್ ಸೋಂಕು ತಪಾಸಣೆ ನಡೆಸಲಾಗಿದೆ.












Click it and Unblock the Notifications