ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ ಆತ್ಮಹತ್ಯೆ ಮಾಡಿಕೊಂಡ 19 ವರ್ಷದ ಯುವತಿ

|
Google Oneindia Kannada News

ಚೆನ್ನೈ ಸೆಪ್ಟೆಂಬರ್ 08: ತಮಿಳುನಾಡಿನ ಅಂಬತ್ತೂರಿನಲ್ಲಿ 19 ವರ್ಷದ ಚೆನ್ನೈ ಯುವತಿಯೊಬ್ಬಳು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (NEET) ಫೇಲ್ ಆಗಿದ್ದಕ್ಕೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2022 ರ ಸುತ್ತಿನ ಪರೀಕ್ಷೆಗಳ ಫಲಿತಾಂಶವನ್ನು ಸೆಪ್ಟೆಂಬರ್ 7 ರಂದು ಬುಧವಾರ ಪ್ರಕಟಿಸಲಾಗಿದೆ.

ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಯುವತಿ ಅಪಾಯಕಾರಿ ಹೆಜ್ಜೆ ಇಟ್ಟಿದ್ದಾಳೆ. ಘಟನೆಯ ಬಗ್ಗೆ ತಿಳಿದ ನಂತರ, ಹುಡುಗಿಯ ಮನೆಯವರು ಅವಳನ್ನು ಚೆನ್ನೈನ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಳು ಎಂದು ಘೋಷಿಸಲಾಯಿತು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ ತಮಿಳುನಾಡಿನಿಂದ ಒಟ್ಟು 1,32,167 ಅಭ್ಯರ್ಥಿಗಳು ಹಾಜರಾಗಿದ್ದರು ಮತ್ತು ರಾಜ್ಯದಿಂದ 67,787 ಮಂದಿ ಮಾತ್ರ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.

ರಾಜ್ಯದಲ್ಲಿ ನೀಟ್‌ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಇದೇ ಮೊದಲಲ್ಲ. ಜುಲೈನಲ್ಲಿ ಪರೀಕ್ಷೆಗೆ ಒಂದು ದಿನ ಮೊದಲು, ತಮಿಳುನಾಡಿನ ಅರಿಯಲೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ತಾನು ಈ ಕ್ರಮ ಕೈಗೊಂಡಿದ್ದೇನೆ ಎಂದು ಯುವತಿ ಬರೆದಿರುವ ಪತ್ರ ಪೊಲೀಸರಿಗೆ ಸಿಕ್ಕಿದೆ.

Chennai: A 19-year-old girl committed suicide after failing the NEET exam

ಇನ್ನೊಂದು ಪ್ರಕರಣದಲ್ಲಿ ಜುಲೈ ಆರಂಭದಲ್ಲಿ 18 ವರ್ಷದ ಹುಡುಗನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. NEET ಪರೀಕ್ಷೆಯನ್ನು ತುಂಬಾ ಕಷ್ಟಪಟ್ಟು ಬಯಸಿದ ಅಂಕಗಳನ್ನು ಗಳಿಸಲು ಸಾಧ್ಯವಾಗದ ಕಾರಣ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೋಣೆಯಲ್ಲಿ ಪತ್ತೆಯಾದ ಡೆತ್‌ ನೋಟ್‌ನಲ್ಲಿ ತಿಳಿಸಲಾಗಿತ್ತು.

ಫಲಿತಾಂಶ ಪ್ರಕಟ:

ಈ ಮಧ್ಯೆ ನೀಟ್ ಫಲಿತಾಂಶದಲ್ಲಿ ತನಿಷ್ಕಾ ರಾಜಸ್ಥಾನದ ಟಾಪರ್ ಆಗಿದ್ದು, ಅವರು ಮೂಲತಃ ಹರಿಯಾಣದವರು. ದೆಹಲಿಯ ವತ್ಸ್ ಆಶಿಶ್ ಬಾತ್ರಾ ದ್ವಿತೀಯ ಸ್ಥಾನ ಹಾಗೂ ಕರ್ನಾಟಕದ ಹೃಷಿಕೇಶ್ ನಾಗಭೂಷಣ ಗಂಗೂಲೆ ಮೂರನೇ ಸ್ಥಾನ ಮತ್ತು ರುಚಾ ಪಾವಾಶೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ವರ್ಷ ಒಟ್ಟು 18.72 ಲಕ್ಷ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಜುಲೈ 17 ರಂದು NEET-UG ಪರೀಕ್ಷೆಯನ್ನು ನಡೆಸಲಾಯಿತು, ಇದರಲ್ಲಿ 95 ಶೇಕಡಾ ನೋಂದಾಯಿತ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. NEET-UG ಅನ್ನು ಭಾರತದ 497 ನಗರಗಳಲ್ಲಿ ಮತ್ತು ವಿದೇಶಗಳಲ್ಲಿ 14 ನಗರಗಳಲ್ಲಿ 3,570 ಕೇಂದ್ರಗಳಲ್ಲಿ ನಡೆಸಲಾಯಿತು.

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
A 19-year-old Chennai girl committed suicide in Tamil Nadu Ambattur on Wednesday after she failed the National Eligibility Entrance Test (NEET).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X