ಎಪಿಜೆ ಅಬ್ದುಲ್ ಕಲಾಂರ ಅಣ್ಣ ಮೊಹಮ್ಮದ್ ನಿಧನ
ರಾಮೇಶ್ವರಂ, ಮಾರ್ಚ್ 7: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎ. ಪಿ.ಜೆ.ಅಬ್ದುಲ್ ಕಲಾಂ ಅವರ ಹಿರಿಯ ಸಹೋದರ ಮೊಹಮ್ಮದ್ ಮುತ್ತು ಮೀರಾ ಲೆಬ್ಬೆ ಮರಕಯಾರ್ ಅವರು ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು. ರಾಮೇಶ್ವರಂನ ಸ್ವಗೃಹದಲ್ಲಿ ಭಾನುವಾರ ನಿಧನರಾದರು ಎಂದು ಕುಟುಂಬಸ್ಥತು ತಿಳಿಸಿದ್ದಾರೆ.
ಮೊಹಮ್ಮದ್ ಮುತ್ತು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು, ಇಂದು ಸುಮಾರು 7: 30 ಕ್ಕೆ ಕೊನೆಯುಸಿರೆಳೆದರು. ಮಾಜಿ ಅಧ್ಯಕ್ಷ ಎಪಿಜೆ ಅಬ್ದುಲ್ ಕಲಾಂ ಅವರು ಜುಲೈ 27, 2015 ರಂದು ಮೇಘಾಲಯದ ಶಿಲ್ಲಾಂಗ್ನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲು ಮುಂದಾಗಿದ್ದವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಲಾಂ ಆಸ್ತಿ ಸಂರಕ್ಷಿಸಿದ್ದ ಮೊಹಮ್ಮದ್ ಕಲಾಂ ಅವರ ದೊಡ್ಡ ಆಸ್ತಿ ಎಂದರೆ ಅವರ ಬಳಿ ಇದ್ದ ಪುಸ್ತಕಗಳು, ವೀಣೆ, ಒಂದು ಲ್ಯಾಪ್ ಟಾಪ್, ವ್ರಿಸ್ಟ್ ವಾಚ್, ಎರಡು ಬೆಲ್ಟ್, ಸಿಡಿ ಪ್ಲೇಯರ್, ಅವರ ನೆಚ್ಚಿನ ನೀಲಿ ಅಂಗಿ. ಇದಲ್ಲದೆ, ಕಲಾಂ ಹಿರಿಯ ಸಹೋದರರೇ ಎಲ್ಲ ಪುಸ್ತಕಗಳ ರಾಯಲ್ಟಿಗೆ ಪಾಲುದಾರರಾಗಿದ್ದರು.
ಆದರೆ, ಸೋದರರು ಹಾಗೂ ಕುಟುಂಬಸ್ಥರು ಕೂಡಾ ಕಲಾಂರಂತೆ ಸರಳ ಜೀವನ ನಡೆಸಿ ಮಾದರಿಯಾಗಿದ್ದರು. ಮಕ್ಕಳಿಗೆ ವಿದ್ಯಾಭ್ಯಾಸದ ಮಹತ್ವ, ಸರ್ವಧರ್ಮ ಸಹಿಷ್ಣುತೆ ಬಗ್ಗೆ ತಿಳಿ ಹೇಳುತ್ತಿದ್ದರು, ಕಲಾಂ ಬಗ್ಗೆ ವಿಶೇಷ ಅಭಿಮಾನವಿತ್ತು, ಎಂದು ಮೊಮ್ಮಕ್ಕಳಲ್ಲಿ ಒಬ್ಬರಾದ ಸಲೀಂ ಖಾನ್ ಸ್ಮರಿಸಿದ್ದಾರೆ. ಮೃತ ಮೊಹಮ್ಮದ್ ಅವರ ಅಂತಿಮ ಸಂಸ್ಕಾರವನ್ನು ಸೋಮವಾರದಂದು ಸ್ವಗ್ರಾಮದಲ್ಲಿ ನೆರವೇರಿಸಲಾಗುತ್ತದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications