• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಂಡ ಸಹಿತ ಆಸ್ತಿ ತೆರಿಗೆ ಪಾವತಿಸಿದ ನಟ ರಜನಿಕಾಂತ್

|

ಚೆನ್ನೈ, ಅಕ್ಟೋಬರ್ 17: ತಮ್ಮ ಒಡೆತನದ ಮದುವೆ ಹಾಲ್‌ನ ಆಸ್ತಿ ತೆರಿಗೆ ಸಂಬಂಧ ಚೆನ್ನೈ ಕಾರ್ಪೊರೇಷನ್ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದ ಸೂಪರ್‌ಸ್ಟಾರ್ ರಜನಿಕಾಂತ್ ದಂತ ಸಹಿತ ಆಸ್ತಿ ತೆರಿಗೆ ಪಾವತಿಸಿದ್ದಾರೆ.

ಚೆನ್ನೈನಲ್ಲಿ ರಜನಿಕಾಂತ್‌ ಅವರ ರಾಘವೇಂದ್ರ ಮದುವೆ ಮಂಟಪಕ್ಕೆ ಆಸ್ತಿ ತೆರಿಗೆ ವಿಳಂಬ ಹಿನ್ನೆಲೆ ಗ್ರೇಟರ್ ಚೆನ್ನೈ ಕಾರ್ಪೊರೇಷನ್ ನೋಟಿಸ್ ನೀಡಿತ್ತು. ಆದರೆ ಆಸ್ತಿ ತೆರಿಗೆ ಪಾವತಿಗೆ ನಿರಾಕರಿಸಿದ್ದ ರಜನಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ಆಸ್ತಿ ತೆರಿಗೆ: ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಸೂಪರ್ ಸ್ಟಾರ್ ರಜನಿಕಾಂತ್

ಆದರೆ ಹೈಕೋರ್ಟ್ ನಲ್ಲಿ ರಜನಿಕಾಂತ್‌ಗೆ ಹಿನ್ನಡೆಯಾದ ಹಿನ್ನೆಲೆಯಲ್ಲಿ, ಇದೀಗ ದಂಡ ಸಮೇತ 6,39,846 ರೂಪಾಯಿಗಳನ್ನು ಪಾವತಿ ಮಾಡಿದ್ದಾರೆ. ಮೊದಲ ಆರು ತಿಂಗಳಿಗಷ್ಟೇ ಅಲ್ಲದೆ ಮುಂದಿನ ಆರು ತಿಂಗಳಿಗೂ ಕೂಡ ತೆರಿಗೆ ಪಾವತಿಸಿದ್ದಾರೆ.

ಕೊರೊನಾ ಸೋಂಕಿನಿಂದಾಗಿ ಮಾರ್ಚ್ 24ರಿಂದ ಮದುವೆ ಹಾಲ್‌ಗಳನ್ನು ಮುಚ್ಚಲಾಗಿತ್ತು. ಇಲ್ಲಿಯವರೆಗೆ ಯಾವ ಆದಾಯವೂ ಬಂದಿಲ್ಲ. ಹಾಗಿರುವಾಗ 6.50 ಲಕ್ಷದಷ್ಟು ಆಸ್ತಿ ತೆರಿಗೆ ಕಟ್ಟುವುದು ಹೇಗೆ ಎಂದು ಉಲ್ಲೇಖಿಸಿದ್ದರು.

ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದೇನೆ. ಕೊನೆಯದಾಗಿ ಫೆಬ್ರವರಿ 14ರಂದು ತೆರೆಗೆ ಪಾವತಿಸಲಾಗಿದೆ. ಲಾಕ್ ಡೌನ್ ಗೂ ಮೊದಲು ಹಾಲ್ ಬುಕ್ ಮಾಡಿದ್ದ ಜನರಿಗೆ ಸರ್ಕಾರದ ಆದೇಶದಂತೆ ಹಣ ಮರುಪಾವತಿಸಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದರು.

ಸೂಪರ್ ಸ್ಟಾರ್ ತಮ್ಮ ವಕೀಲ ವಿಜಯನ್ ಸುಬ್ರಮಣಿಯನ್ ಮೂಲಕ ಮನವಿ ಸಲ್ಲಿಸಿದ್ದಾರೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ರಜನಿಕಾಂತ್ ಸದ್ಯ ಅಣ್ಣಾತೆ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಲಾಕ್ ಡೌನ್ ಬಳಿಕ ಇನ್ನೂ ಚಿತ್ರೀಕರಣ ಪ್ರಾರಂಭ ಮಾಡಿಲ್ಲ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಸದ್ಯದಲ್ಲೇ ಮತ್ತೆ ಚಿತ್ರೀಕರಣಕ್ಕೆ ಹೊರಡಲು ಸಜ್ಜಾಗುತ್ತಿದೆ. ನವೆಂಬರ್ ನಿಂದ ಅಣ್ಣಾತೆ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.

English summary
Top actor Rajinikanth on Friday paid a property tax of Rs 6.39 lakh for the second half year of 2020-21 for his marriage hall in Chennai to the Greater Chennai Corporation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X