• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನೀಟ್ ಪರೀಕ್ಷೆಯಲ್ಲಿ ಫೇಲ್:ತಮಿಳುನಾಡಿನಲ್ಲಿ 3 ವಿದ್ಯಾರ್ಥಿನಿಯರು ಆತ್ಮಹತ್ಯೆ

|

ಚೆನ್ನೈ, ಜೂನ್ 7: ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮನನೊಂದು ತಮಿಳುನಾಡಿನ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬುಧವಾರ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಚೆನ್ನೈನಿಂದ 170 ಕಿ.ಮೀ ದೂರದ ವಿಲ್ಲುಪುರಂ ನಿವಾಸಿ ಮೀನುಗಾರರ ಕುಟುಂಬದವಳಾಗಿದ್ದ 18 ವರ್ಷದ ವಿದ್ಯಾರ್ಥಿನಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಫಣೀಂದ್ರ ರಾಜ್ಯಕ್ಕೆ ಪ್ರಥಮ

ಕಳೆದ ಬಾರಿಯ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳು ಬಂದಿರಲಿಲ್ಲ, ಈ ಬಾರಿಯೂ ಕಡಿಮೆ ಅಂಕ ಗಳಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುಪುರ ಪಟ್ಟುಕೊಟ್ಟಾಯ್‌ನಲ್ಲಿ ಬುಧವಾರ ಇಬ್ಬರು ವಿದ್ಯಾರ್ಥಿನಿಯರು ಎನ್ ವೈಷಿಯಾ, ರಿತುಶ್ರೀ ಎನ್ನುವ ವಿದ್ಯಾರ್ಥಿನಿಯರು ಮೃತಪಟ್ಟಿದ್ದರು. ಇಂದು ಮೋನಿಶಾ ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ ಎರಡು ವರ್ಷಗಳಲ್ಲಿ ತಮಿಳುನಾಡಿನಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

English summary
The NEET exam result Declared wednesday in two days 3 girl students from Tamil Nadu commited suicide because they failed in the exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X