ಕೊರೊನಾ ಭಯದಲ್ಲಿ ಪ್ರಯಾಣಿಕರ ಮೇಲೆ ಸರ್ಕಾರದ ನಿರ್ಬಂಧ!

ಚೆನ್ನೈ, ಮಾರ್ಚ್ 09: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುಬ ಎರಡು ರಾಜ್ಯಗಳಲ್ಲಿ ಈಗ ಕೊರೊನಾ ಭೀತಿ ಹೆಚ್ಚಾಗಿದೆ. ಕೇರಳದಿಂದ ತಮಿಳುನಾಡಿಗೆ ಆಗಮಿಸುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಕೇರಳದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆ ಸುರಕ್ಷಿತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಮಿಳನಾಡು ಸರ್ಕಾರ ತಿಳಿಸಿದೆ.

ತಮಿಳುನಾಡಿಗೆ ಕೇರಳದಿಂದ ಬರುವ ಪ್ರಯಾಣಿಕರನ್ನು ವಲಾಯರ್ ಗಡಿಯಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮಂಗಳವಾರ ಸಂಜೆಯಿಂದ ಗಡಿಯಲ್ಲಿ ಸರಕು ಸಾಗಾಣಿಕೆ ಟ್ರಕ್, ಸಂಚಾರಿ ವಾಹನಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರ ದೇಹದ ಉಷ್ಣಾಂಶವನ್ನು ಪರೀಕ್ಷಿಸಲಾಗುತ್ತದೆ.

ರಾಜ್ಯಕ್ಕೆ ಆಗಮಿಸುವ 72 ಗಂಟೆಗಳಿಗೂ ಮೊದಲು ಪ್ರಯಾಣಿಕರು RT-PCR ತಪಾಸಣೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಈ ಪಾಸ್ ಹೊಂದುವ ಬಗ್ಗೆ ಆದೇಶ

ಈ ಪಾಸ್ ಹೊಂದುವ ಬಗ್ಗೆ ಆದೇಶ

ಕರ್ನಾಟಕ, ಆಂಧ್ರ ಪ್ರದೇಶ, ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಿಂದ ಆಗಮಿಸುವ ಅಂತರ್ ರಾಜ್ಯ ಪ್ರಯಾಣಿಕರು ಕಡ್ಡಾಯವಾಗಿ ಈ-ಪಾಸ್ ಹೊಂದಿರಬೇಕು. ಈ ಬಗ್ಗೆ ಕೊಯಮತ್ತೂರು ಜಿಲ್ಲಾಧಿಕಾರಿ ಕೆ. ರಾಜಾಮಣಿ ಅವರು ಪಾಲಕ್ಕಾಡ್ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಎಲ್ಲ ಪ್ರಯಾಣಿಕರು 72 ಗಂಟೆಗಳ ಹಿಂದೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರಬೇಕು ಎಂದು ಹೇಳಿದ್ದಾರೆ.

ಕೊಯಮತ್ತೂರು ಲ್ಲೆ ಪ್ರವೇಶಕ್ಕೆ ಈ-ಪಾಸ್ ಕಡ್ಡಾಯ

ಕೊಯಮತ್ತೂರು ಲ್ಲೆ ಪ್ರವೇಶಕ್ಕೆ ಈ-ಪಾಸ್ ಕಡ್ಡಾಯ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ನಿರ್ಬಂಧಿತ ಪ್ರದೇಶಗಳಲ್ಲಿ ಸಂಚಾರಕ್ಕೆ ಅನುಕೂಲವಾಗುವಂತೆ ಈ-ಪಾಸ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿತ್ತು. ಸಾರ್ವಜನಿಕರು, ಅಧಿಕಾರಿಗಳು, ಚಾಲಕರು, ಮುದ್ರಣ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳ ಸದಸ್ಯರಿಗೆ ಈ ಪಾಸ್ ನೀಡಲಾಗುತ್ತಿತ್ತು. ಪಾಸ್ ಹೊಂದಿಲ್ಲದ ವ್ಯಕ್ತಿಗಳು ಕೊಯಂತ್ತೂರ್ ಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ತಮಿಳುನಾಡು ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ-ಪಾಸ್ ಪಡೆಯುವುದಕ್ಕೆ ಅವಕಾಶವಿದೆ.

ತಮಿಳುನಾಡಿನಲ್ಲಿ ಕೊರೊನಾವೈರಸ್ ಪ್ರಕರಣಗಳ ಏರಿಳಿತ

ತಮಿಳುನಾಡಿನಲ್ಲಿ ಕೊರೊನಾವೈರಸ್ ಪ್ರಕರಣಗಳ ಏರಿಳಿತ

ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ತಮಿಳುನಾಡು ಕೂಡ ತತ್ತರಿಸಿದೆ. ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿದೆ. ತಮಿಳುನಾಡಿನಲ್ಲಿ ಒಟ್ಟು 8,55,677 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ 8,39,138 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 4018 ಸಕ್ರಿಯ ಪ್ರಕರಣಗಳಿರುವ ಹಿನ್ನೆಲೆ ಸರ್ಕಾರವು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದೆ.

ಕೇರಳದಲ್ಲಿ ಕಡಿವಾಣವಿಲ್ಲದೇ ಬೆಳೆಯುತ್ತಿರುವ ಕೊರೊನಾ

ಕೇರಳದಲ್ಲಿ ಕಡಿವಾಣವಿಲ್ಲದೇ ಬೆಳೆಯುತ್ತಿರುವ ಕೊರೊನಾ

ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಕೇರಳದಲ್ಲಿ ಕಡಿವಾಣವೇ ಇಲ್ಲದಂತೆ ಆಗಿದೆ. ಪ್ರತಿನಿತ್ಯ ಸಾವಿರ ಸಾವಿನ ಕೊವಿಡ್-19 ಪ್ರಕರಣಗಳು ವರದಿಯಾಗುತ್ತಿದೆ. ಕೇರಳದಲ್ಲಿ ಈವರೆಗೂ 10,78,740 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಈವರೆಗೂ 10,34,895 ಸೋಂಕಿತರು ಗುಣಮುಖರಾಗಿದ್ದಾರೆ. 39,233 ಸಕ್ರಿಯ ಪ್ರಕರಣಗಳಿದ್ದು, ಈವರೆಗೂ 4313 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+