ತಮಿಳುನಾಡು ಚುನಾವಣೆ: ಅಮಿತ್ ಶಾ, ಖುಷ್ಬೂರಿಂದ ಭರ್ಜರಿ ರೋಡ್ ಶೋ
ಚೆನ್ನೈ, ಏಪ್ರಿಲ್ 3: ತಮಿಳುನಾಡು ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಬ್ಬರ ಜೋರಾಗಿ ಸಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಥೌಂಸೆಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು.
ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಅವರ ಕನಸನ್ನು ನನಸು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮಾತ್ರ ಸಾಧ್ಯ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಒಳ್ಳೆಯ ಕೆಲಸ ಮಾಡಿದ್ದಾರೆ. ಡಂಬಲ್ ಎಂಜಿನ್ ಸರ್ಕಾರ ರಚಿಸುವಂತೆ ಜನರಲ್ಲಿ ಮನವಿ ಮಾಡುವುದಾಗಿ ಅಮಿತ್ ಶಾ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಂಶಪಾರಂಪರ್ಯ ಹಾಗೂ ಭ್ರಷ್ಟತೆಯಿಂದ ಕೂಡಿರುವ ಡಿಎಂಕೆ- ಕಾಂಗ್ರೆಸ್ ನ್ನು ಚುನಾವಣೆಯಲ್ಲಿ ಸೋಲಿಸಿದಾಗ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿಯಾಗಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ 12ನೇ ಮಾರ್ಚ್‌ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 20 ಮಾರ್ಚ್ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನವಾಗಿದೆ. ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ತಮಿಳುನಾಡು ವಿಧಾನಸಭೆಯ ಅವಧಿಯು ಮೇ 24ರಂದು ಅಂತ್ಯಗೊಳ್ಳಲಿದೆ. ಚುನಾವಣೆಯ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಹೀಗಾಗಿ ಅವಧಿ ಪೂರ್ಣಗೊಳ್ಳುವ ಮುನ್ನವೇ ಹಾಲಿ ವಿಧಾನಸಭೆ ವಿಸರ್ಜನೆಯಾಗಿ ಹೊಸ ಸರ್ಕಾರ ಸ್ಥಾಪನೆಯಾಗಬಹುದು.
ಆದರೆ ಇದು ಫಲಿತಾಂಶವನ್ನು ಅವಲಂಬಿಸಿದೆ. ತಮಿಳುನಾಡು ವಿಧಾನಸಭೆಯ ಒಟ್ಟು ಸೀಟುಗಳ ಪೈಕಿ 44 ಕ್ಷೇತ್ರಗಳು ಪರಿಶಿಷ್ಟ ಜಾತಿ ಹಾಗೂ ಎರಡು ಸೀಟುಗಳು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾಗಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications