• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತಮಿಳುನಾಡು ಚುನಾವಣೆ: ಅಮಿತ್ ಶಾ, ಖುಷ್ಬೂರಿಂದ ಭರ್ಜರಿ ರೋಡ್‌ ಶೋ

|

ಚೆನ್ನೈ, ಏಪ್ರಿಲ್ 3: ತಮಿಳುನಾಡು ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಬ್ಬರ ಜೋರಾಗಿ ಸಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಥೌಂಸೆಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು.

ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಅವರ ಕನಸನ್ನು ನನಸು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮಾತ್ರ ಸಾಧ್ಯ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಒಳ್ಳೆಯ ಕೆಲಸ ಮಾಡಿದ್ದಾರೆ. ಡಂಬಲ್ ಎಂಜಿನ್ ಸರ್ಕಾರ ರಚಿಸುವಂತೆ ಜನರಲ್ಲಿ ಮನವಿ ಮಾಡುವುದಾಗಿ ಅಮಿತ್ ಶಾ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಂಶಪಾರಂಪರ್ಯ ಹಾಗೂ ಭ್ರಷ್ಟತೆಯಿಂದ ಕೂಡಿರುವ ಡಿಎಂಕೆ- ಕಾಂಗ್ರೆಸ್ ನ್ನು ಚುನಾವಣೆಯಲ್ಲಿ ಸೋಲಿಸಿದಾಗ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿಯಾಗಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ 12ನೇ ಮಾರ್ಚ್‌ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. 19ನೇ ಮಾರ್ಚ್ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 20 ಮಾರ್ಚ್ ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 22 ಕೊನೆ ದಿನವಾಗಿದೆ. ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ತಮಿಳುನಾಡು ವಿಧಾನಸಭೆಯ ಅವಧಿಯು ಮೇ 24ರಂದು ಅಂತ್ಯಗೊಳ್ಳಲಿದೆ. ಚುನಾವಣೆಯ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಹೀಗಾಗಿ ಅವಧಿ ಪೂರ್ಣಗೊಳ್ಳುವ ಮುನ್ನವೇ ಹಾಲಿ ವಿಧಾನಸಭೆ ವಿಸರ್ಜನೆಯಾಗಿ ಹೊಸ ಸರ್ಕಾರ ಸ್ಥಾಪನೆಯಾಗಬಹುದು.

ಆದರೆ ಇದು ಫಲಿತಾಂಶವನ್ನು ಅವಲಂಬಿಸಿದೆ. ತಮಿಳುನಾಡು ವಿಧಾನಸಭೆಯ ಒಟ್ಟು ಸೀಟುಗಳ ಪೈಕಿ 44 ಕ್ಷೇತ್ರಗಳು ಪರಿಶಿಷ್ಟ ಜಾತಿ ಹಾಗೂ ಎರಡು ಸೀಟುಗಳು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾಗಿವೆ.

English summary
Union home minister Amit shah campaigns for BJP candidate Kushboo Sundar at Teynampet in Chennai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X