ಚೆನ್ನೈನಲ್ಲಿ ಸಿಎಎ ವಿರುದ್ಧ ಕೂಗು: 170 ಮಂದಿ ಬಂಧನ
ಚೆನ್ನೈ, ಫೆಬ್ರವರಿ 15: ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಹೋರಾಟ ಆರಂಭವಾಗಿದೆ. ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ 170 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಚೆನ್ನೈನ 5 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸುತ್ತಿದ್ದು ಮಿಂಟ್ ಸೇತುವೆ ಪ್ರವೇಶದ್ವಾರವನ್ನು ಮುಚ್ಚಿದರು.
ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರನ್ನು ಚದುರಿಸಿದ್ದು ಹಲವರನ್ನು ಬಂಧಿಸಿದ್ದಾರೆ.

ಪ್ರತಿಭಟನಾಕಾರನ್ನು ಚದುರಿಸಲು ಈ ಪೊಲೀಸರು ಲಾಠಿ ಚಾರ್ಚ್ ಮಾಡಬೇಕಾಯಿತು. ಈ ವೇಳೆ ಹಲವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು ಸಾವಿರಕ್ಕೂ ಹೆಚ್ಚು ಪೊಲೀಸರು ಅಲ್ಲಿ ಭದ್ರತೆಗೆಂದು ನಿಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಪೊಲೀಸರ ಅಗತ್ಯವಿಲ್ಲ, ನೀವು ಇಲ್ಲಿಂದ ಹೋಗಿ ಎಂದು ಪ್ರತಿಭಟನಾಕಾರರು ಪೊಲೀಸರ ಮೇಲೆ ಒತ್ತಡ ಹೇರಿದ್ದರು. ಇದಾದ ಬಳಿಕ ಮಾತಿಗೆ ಮಾತು ಬೆಳೆದು ಕೊನೆಗೆ 170 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಧ್ಯಾಹ್ನ 2 ರಿಂದ 5 ಗಂಟೆಯ ಒಳಗೆ ಎರಡು ಬಾರಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರಿಗೆ ಗಾಯವಾಗಿದ್ದು ಅವರನ್ನು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಂಟ್ ಬ್ರಿಡ್ಜ್ ನಲ್ಲಿ ಪೊಲೀಸರು ರಸ್ತೆಯನ್ನು ಬಂದ್ ಮಾಡಿದ್ದರು. ಹೆಚ್ಚು ಪ್ರತಿಭಟನಾಕಾರರು ಸೇರದಂತೆ ನಿಗಾವಹಿಸಲಾಗಿತ್ತು.












Click it and Unblock the Notifications