ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ

|
Google Oneindia Kannada News

ಚೆನ್ನೈ, ಡಿಸೆಂಬರ್ 08: ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನವಾಗಿರುವ ಮಾಹಿತಿ ತಿಳಿದುಬಂದಿದೆ.

ಸಮಯ 2:15: ಹೆಲಿಕಾಪ್ಟರ್‌ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿಸಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದು ಬಂದಿದೆ.

12 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ಕನಿಷ್ಠ ಆರು ಆಂಬ್ಯುಲೆನ್ಸ್ ತಂಡಗಳನ್ನು ಕಳಿಸಲಾಗಿದೆ. ಆಸ್ಪತ್ರೆಗೆ ಕಳುಹಿಸಲಾದ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Army Helicopter Carrying Senior Defence Officials Crashes In Tamil Nadu

ನೀಲ್‌ಗಿರಿ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ವಿಮಾನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಊಟಿಯಲ್ಲಿ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್ ರಾಂಕ್‌ನ ಅಧಿಕಾರಿಗಳಿದ್ದರು.

Army Helicopter Carrying Senior Defence Officials Crashes In Tamil Nadu

ಮೂವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ನಾಲ್ಕು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಎಂಐ ಸೀರೀಸ್‌ನ ಹೆಲಿಕಾಪ್ಟರ್ ಇದಾಗಿತ್ತು.

ಸೇನೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕುರಿತು ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದೆ, ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಇರುವುದನ್ನು ಭಾರತೀಯ ಸೇನೆ ಖಚಿತಪಡಿಸಿದೆ. ಜತೆಗೆ ತನಿಖೆಗೆ ಆದೇಶಿಸಿದೆ.

ಹವಾಮಾನ ವೈಪರೀತ್ಯವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ತಮಿಳುನಾಡಿನ ಕುನೂರ್‌ನಲ್ಲಿ ಘಟನೆ ನಡೆದಿದೆ. ಕೊಯಮತ್ತೂರು, ಸುಳೂರ್ ನಡುವೆ ಘಟನೆ ನಡೆದಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮಿಳುನಾಡಿಗೆ ಹೊರಟಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದ್ದು, ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗುರುತು ಪತ್ತೆ ಹಚ್ಚಲಾಗುತ್ತಿದೆ.

9 ಪ್ರಯಾಣಿಕರು ಹಾಗೂ 5 ಮಂದಿ ಕ್ರ್ಯೂ ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣೆ ಮಾಡಲಾಗಿದ್ದ ಮೂವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಇದ್ದವರ ಪಟ್ಟಿ
-Gen Bipin Rawat
-Madhulika Rawat
-Brig LS Lidder
-Lt Col Harijinder Singh
-NK Guruewak Singh
-NK Jitendra Kumar
-L/NK Vivek Kumar
-L-NK Sai Teja
-Hav Satpal

ಆಂತರಿಕ ತನಿಖೆಗೆ ಆಗ್ರಹ

ಹೆಲಿಕಾಪ್ಟರ್ ಅಪಘಾತದ ಬಗ್ಗೆ ಆಂತರಿಕವಾಗಿ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್‌ ನಾಯಕ ಅಭಿಷೇಕ್‌ ಸಿಂಘ್ವಿ ಆಗ್ರಹ ಮಾಡಿದ್ದಾರೆ. ಈ ಹೆಲಿಕಾಪ್ಟರ್‌ಗಳನ್ನು ಇತ್ತೀಚೆಗೆ ಖರೀದಿಸಲಾಗಿದೆ ಎಂದು ಕೂಡಾ ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚೆನ್ನೈನಿಂದ ಕೊಯಮತ್ತೂರಿಗೆ ಪ್ರಯಾಣ ಬೆಳೆಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಮಾಹಿತಿ ನೀಡಿ ಕುನೂರಿಗೆ ತೆರಳಿದ್ದಾರೆ.ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 14 ಜನರಿದ್ದ ಸೇನಾ ಹೆಲಿಕಾಪ್ಟರ್ ಪತನ ತಮಿಳುನಾಡಿನ ಕುನೂರ್ ಬಳಿ ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ಐಎಎನ್ ಎಸ್ ಕೂ ಮಾಡಿದೆ.

'CDS ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟಾರ್ ಇದು ತಮಿಳುನಾಡು ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಇತರರಿಗಾಗಿ ಶೋಧ ನಡೆಸಲಾಗುತ್ತಿದೆ' ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಕೊ ಮಾಡಿರುವ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, 'CDS ಜನರಲ್ ಬಿಪಿನ್ ರಾವತ್ ಮತ್ತು ಹಿರಿಯ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ! ಅವರ ಸುರಕ್ಷತೆಗಾಗಿ ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ಪ್ರಾರ್ಥಿಸಿದ್ದಾರೆ.

ಪ್ರತ್ಯಕ್ಷದರ್ಶಿ ಮಂಜಪ್ಪ ಸತ್ತಿರಾಮ್ ಅವರು ಹೇಳುವ ಪ್ರಕಾರ ಕುನೂರಿನ ಕಟ್ಟೇರಿ ಹಿಲ್ಸ್‌ನಲ್ಲಿ ಘಟನೆ ನಡೆದಿದೆ. ಇದು ಊಟಿಯಿಂದ 25 ಕಿ.ಮೀ ದೂರದಲ್ಲಿದೆ. ಬೆಳಗ್ಗೆ 11.20ಕ್ಕೆ ಘಟನೆ ಸಂಭವಿಸಿದೆ. ಚಳಿಗಾಲ ಆರಂಭವಾಗಿರುವುದರಿಂದ ಮಂಜು ಕವಿದಿತ್ತು, ಇದೇ ಈ ಘಟನೆಗೆ ಕಾರಣವಾಗಿದೆ.

English summary
Army Helicopter Carrying Senior Defence Officials Crashes In Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X