ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ಮುಂದಿನ ವಾರದವರೆಗೂ ಮಳೆ, ಶಾಲೆಗಳು ಬಂದ್

|
Google Oneindia Kannada News

ಚೆನ್ನೈ, ನವೆಂಬರ್ 18: ಚೆನ್ನೈನಲ್ಲಿ ಮುಂದಿನ ವಾರದವರೆಗೂ ಭಾರಿ ಮಳೆ ಸುರಿಯಲಿದ್ದು, ಶಾಲೆಗಳನ್ನು ಮುಚ್ಚಲಾಗಿದೆ.

ಕಳೆದ ಕೆಲವು ದಿನಗಳಿಂದ ತಮಿಳುನಾಡಿನ ಕೆಲವು ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ಚೆನ್ನೈನಲ್ಲಿ ಮಳೆ ಸುರಿಯುತ್ತಿದೆ. ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳು ಜಲಾವೃತವಾಗಿದೆ. ರಾಜ್ಯದಾದ್ಯಂತ ಅನೇಕ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

ತಮಿಳುನಾಡಿನಲ್ಲಿ 800ಕ್ಕೂ ಹೆಚ್ಚು ಜನರನ್ನು ಚೆನ್ನೈನ ಪರಿಹಾರ ಶಿಬಿರಗಳಿಗೆ ಶಿಫ್ಟ್ ಮಾಡಲಾಗಿದೆ. ಚೆನ್ನೈನ 16ಕ್ಕೂ ಹೆಚ್ಚು ಏರಿಯಾದ ರಸ್ತೆಗಳು ಜಲಾವೃತವಾಗಿದ್ದು, ಚೆನ್ನೈನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರಿಗೆ ಸುರಕ್ಷಿತ ಪ್ರದೇಶಗಳಲ್ಲಿರಲು ಎಚ್ಚರಿಕೆ ನೀಡಲಾಗಿದೆ.

As Rainfall Pounds Parts Of Tamil Nadu, Districts Shut Schools And Colleges

ಗುರುವಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ರಾಣಿಪೇಟ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ತಮಿಳುನಾಡಿನ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಗುರುವಾರ ರಾತ್ರಿಯವರೆಗೂ ತಮಿಳುನಾಡಿನ ಈ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ಪ್ರದೇಶಗಳಲ್ಲಿ ಇಂದು ಸುಮಾರು 20 ಮಿಮೀ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಮತ್ತು ನಾಳೆ ಮಳೆಯು ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ತಮಿಳುನಾಡು ಕರಾವಳಿಯನ್ನು ತಲುಪಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಆಂಧ್ರಪ್ರದೇಶ, ಪುದುಚೇರಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ತಮಿಳುನಾಡು ಮಾತ್ರವಲ್ಲ, ಪುದುಚೇರಿ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದಲ್ಲೂ ಮುಂದಿನ 5 ದಿನ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದ ರಸ್ತೆಗಳಲ್ಲಿ ನೀರು ತುಂಬಿದೆ. ಕೆಲವೆಡೆ ಭೂ ಕುಸಿತ ಉಂಟಾಗಿದೆ. ಚೆನ್ನೈನ ಕೆ.ಕೆ.ಪುರಂನ ಮುಖ್ಯ ರಸ್ತೆ ಮಳೆಯಿಂದ ಹಾನಿಗೊಳಗಾಗಿದೆ.

ತಮಿಳುನಾಡಿನ ತಿರುವಣ್ಣಾಮಲೈ, ಕಲ್ಲಕುರಿಚಿ, ಸೇಲಂ, ಪೆರಂಬಲೂರ್, ತಿರುಚಿರಾಪಳ್ಳಿ, ಕರೂರ್, ತಂಜಾವೂರು, ತಿರುವರೂರು, ಪುದುಕ್ಕೊಟ್ಟೈ, ದಿಂಡಿಗಲ್, ಮಧುರೈ, ಥೇಣಿ, ಶಿವಗಂಗಾ, ವಿರುಧುನಗರ, ತೆಂಕಶಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಚೆನ್ನೈ ನಗರಕ್ಕೆ ಕರಾವಳಿ ಕಾವಲು ಪಡೆಯ ಐದು ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಚೆನ್ನೈನಲ್ಲಿ ಜಲಾವೃತ್ತ ಪ್ರದೇಶಗಳಿಂದ ನೀರುನ್ನು ಹೊರಹಾಕಲು 620 ಪಂಪ್ ಗಳನ್ನು ಬಳಸಲಾಗುತ್ತಿದೆ ಎಂದು ಚೆನ್ನೈನ ಪಾಲಿಕೆ ಆಯುಕ್ತ ಗಗನ್ ದೀಪ್ ಸಿಂಗ್ ಹೇಳಿದ್ದಾರೆ.

ನಾಳೆ ಮತ್ತು ನಾಡಿದ್ದು ಕನ್ಯಾಕುಮಾರಿ ಹಾಗೂ ದಕ್ಷಿಣ ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಖಾಸಗಿ ಹವಾಮಾನ ತಜ್ಞರು ನೀಡಿದ್ದಾರೆ.

ತಮಿಳುನಾಡನಲ್ಲಿ ಭಾರಿ ಮಳೆಯಿಂದ ಎಲ್ಲ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ತಮಿಳುನಾಡಿನ ಜಲಾಶಯಗಳ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯವೇ 224 ಟಿಎಂಸಿ. ಸದ್ಯ ತಮಿಳುನಾಡು ಡ್ಯಾಂಗಳಲ್ಲಿ 200 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ತಮಿಳುನಾಡಿನ ಕಾವೇರಿ ಕಣಿವೆಯ ಮೆಟ್ಟೂರು, ಭವಾನಿ ಸಾಗರ, ಅಮರಾವತಿ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ.

ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮುಂದಿನ ಒಂದು ವಾರದಲ್ಲಿ ಪರಿಹಾರದ ಚೆಕ್ ನೀಡುವುದಾಗಿ ಕಂದಾಯ ಸಚಿವ ರಾಮಚಂದ್ರನ್ ಹೇಳಿದ್ದಾರೆ.

ಬಾರಿ ಮಳೆಯಿಂದ ತಮಿಳುನಾಡಿನಲ್ಲಿ ಬೆಳೆದು ನಿಂತ ಬೆಳೆ ಹಾಳಾಗಿದೆ. 1.45 ಲಕ್ಷ ಎಕರೆ ಬೆಳೆ ಹಾಳಾಗಿದೆ. 6 ಸಾವಿರ ಎಕರೆ ತೋಟಗಾರಿಕೆ ಬೆಳೆ ಹಾಳಾಗಿದೆ. 157ಜಾನುವಾರಗಳು ಸಾವನ್ನಪ್ಪಿವೆ, 1,146 ಗುಡಿಸಲು ಹಾಗೂ 237 ಮನೆಗಳು ಕುಸಿದುಬಿದ್ದಿವೆ. ಚೆನ್ನೆೈ ಪಾಲಿಕೆಯು ಇದುವರೆಗೂ 6 ಲಕ್ಷ ಆಹಾರ ಪಾಕೆಟ್ ಗಳನ್ನು ಜನರಿಗೆ ವಿತರಿಸಿದೆ. 65 ಸಾವಿರ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

ನವೆಂಬರ್ 18ರಂದು ಸಂಜೆ ಉತ್ತರ ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪ್ರವಾಹ ಪರಿಸ್ಥಿತಿ ಉಲ್ಬಣಿಸಬಹುದಾದ ಕೆರೆಗಳ ಗುರುತಿಸಲು ಡ್ರೋನ್ ಮೂಲಕ ಸರ್ವೆ ನಡೆಸಲಾಗಿದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಎನ್. ಸುಬ್ರಮಣಿಯನ್ ತಿಳಿಸಿದ್ದಾರೆ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಿರುವಳ್ಳೂರು, ಚೆನ್ನೈ, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮತ್ತು ಪ್ರತ್ಯೇಕವಾದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚೆಂಗಲ್ಪಟ್ಟು ಮತ್ತು ತಿರುವಣ್ಣಾಮಲೈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೇಲಂ, ಧರ್ಮಪುರಿ, ಕೃಷ್ಣಗಿರಿ, ಈರೋಡ್, ಕಲ್ಲಕುರಿಚಿ, ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Recommended Video

Bangalore Weather Forecast - ಇನ್ನೂ ಮೂರು ದಿನ ಮಳೆ | Oneindia Kannada

ಚೆನ್ನೈನಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸೂಚನೆ: ರೆಡ್ ಅಲರ್ಟ್ ಘೋಷಣೆಚೆನ್ನೈನಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸೂಚನೆ: ರೆಡ್ ಅಲರ್ಟ್ ಘೋಷಣೆ

English summary
A number of districts in Tamil Nadu, including Chennai, Theni, Tuticorin and Dindigul, have announced closure of schools for the day in the wake of very rainfall in the area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X