Breaking; ಐಐಟಿ ಮದ್ರಾಸ್ ಕೋವಿಡ್ ಪ್ರಕರಣ 171ಕ್ಕೆ ಏರಿಕೆ
ಚೆನ್ನೈ, ಏಪ್ರಿಲ್ 28; ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಮತ್ತೆ 31ಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕ್ಯಾಂಪಸ್‌ನಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆಯಾಗಿದೆ.
ತಮಿಳುನಾಡಿನ ಆರೋಗ್ಯ ಕಾರ್ಯದರ್ಶಿ ಡಾ. ಜೆ. ರಾಧಾಕೃಷ್ಣನ್ ಈ ಕುರಿತು ಗುರುವಾರ ಮಾಹಿತಿ ನೀಡಿದರು. "ಇದುವರೆಗೂ ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ 171 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ" ಎಂದರು.
"ಗುರುವಾರ 31ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕ್ಯಾಂಪಸ್‌ನಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 111 ಆಗಿದೆ" ಎಂದು ಆರೋಗ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಐಐಟಿ ಮದ್ರಾಸ್ ಕ್ಯಾಂಪಸ್‌ನಲ್ಲಿ ಏಪ್ರಿಲ್ 21ರಂದು 12 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಬಳಿಕ ಕ್ಯಾಂಪಸ್‌ನಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಸೋಂಕು ತಗುಲಿದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಲ್ಲಿಯೇ ಕ್ವಾರಂಟೈನ್ ಮಾಡಲಾಗುತ್ತಿದೆ.
ಸೋಮವಾರ ಡಾ. ಜೆ. ರಾಧಾಕೃಷ್ಣನ್ ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳು, ಸಿಬ್ಬಂದಿಗಳ ಜೊತೆ ಸಂವಾದ ನಡೆಸಿದ್ದರು. ಕ್ಯಾಂಪಸ್‌ನಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಚೆನ್ನೈ ನಗರದಲ್ಲಿ ಬುಧವಾರ 59 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು, ಸಕ್ರಿಯ ಪ್ರಕರಣಗಳು 298. ರಾಜ್ಯದ ಒಟ್ಟು ಪ್ರಕರಣಗಳು 7,51,613 ಆಗಿದೆ.












Click it and Unblock the Notifications