Breaking: ತಮಿಳುನಾಡಿನಲ್ಲಿ ರಥೋತ್ಸವದ ವೇಳೆ ವಿದ್ಯುತ್ ತಂತಿ ತಗುಲಿ 11 ಮಂದಿ ದುರ್ಮರಣ

ತಂಜಾವೂರ್, ಏಪ್ರಿಲ್ 27: ತಮಿಳುನಾಡಿನಲ್ಲಿ ಸಂಭ್ರಮದ ರಥೋತ್ಸವ ನಡೆಸುತ್ತಿರುವುದರ ಮಧ್ಯೆ ಸೂತಕದ ಛಾಯೆ ಆವರಿಸಿದೆ. ತಂಜಾವೂರು ಜಿಲ್ಲೆಯ ಕಲಿಮೇಡು ಗ್ರಾಮದಲ್ಲಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು ಭಾರೀ ದುರಂತ ಸಂಭವಿಸಿದೆ.

At least 10 people died after a chariot festival came in contact with a live wire in Thanjavur district

ತಂಜಾವುರ್ ಜಿಲ್ಲೆ ಕಲಿಮೇಡು ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ 94ನೇ ಅಪ್ಪರ ಗುರುಪೂಜೆ ಅಂಗವಾಗಿ ರಥೋತ್ಸವ ನಡೆಸಲಾಗುತ್ತಿತ್ತು. ಮಂಗಳವಾರ ರಾತ್ರಿ ನಡೆದ ರಥೋತ್ಸವದಲ್ಲಿ ನೂರಾರು ಭಕ್ತಾಧಿಗಳು ಭಾಗವಹಿಸಿದ್ದರು. ಈ ವೇಳೆ ರಥ ಎಳೆಯುವ ಸಂದರ್ಭದಲ್ಲಿ ವಿದ್ಯುತ್ ತಂತಿಯೊಂದು ರಥಕ್ಕೆ ತಗುಲಿದ್ದು, ಸ್ಥಳದಲ್ಲೇ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಪ್ರಾಣ ಬಿಟ್ಟಿದ್ದಾರೆ.

ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಟ್ಟು ಮೃತ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಗೊಂಡ ರೋಗಿಗಳನ್ನು ದಾಖಲಿಸಿರುವ ತಂಜಾವೂರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕೇಂದ್ರ ವಲಯ ತಿರುಚಿರಾಪಳ್ಳಿಯ ಐಜಿಪಿ ವಿ ಬಾಲಕೃಷ್ಣನ್ ಮತ್ತು ತಂಜಾವೂರು ಎಸ್ಪಿ ರವಳಿ ಪ್ರಿಯಾ ಭೇಟಿ ನೀಡಿದರು.

At least 10 people died after a chariot festival came in contact with a live wire in Thanjavur district

ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ:
ತಂಜಾವೂರ್ ಜಿಲ್ಲೆಯ ಕಲಿಮೇಡು ಗ್ರಾಮದ ಅಯ್ಯಪ್ಪ ಸ್ವಾಮಿಯ ರಥೋತ್ಸವದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ:
ತಂಜಾವೂರ್ ಜಿಲ್ಲೆಯಲ್ಲಿ ರಥೋತ್ಸವದ ವೇಳೆ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+