ರಾಹುಲ್‌ ಗಾಂಧಿ ತಮಿಳು ಹುಡುಗಿ ಮದುವೆಯಾಗ್ತಾರಾ?

ಚೆನ್ನೈ, ಸೆಪ್ಟೆಂಬರ್‌, 11: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಕಾಂಗ್ರೆಸ್‌ನಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ಭಾಗವಾಗಿ ತಮಿಳುನಾಡಿನಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮಿಳುನಾಡು ಹುಡುಗಿಯನ್ನು ಮದುವೆಯಾಗುತ್ತಾರೆ? ಎಂಬ ಮಾತುಗಳು ಕೇಳಿಬಂದಿವೆ.

ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಹಲವಾರು ಸದಸ್ಯರು 150 ದಿನಗಳ ಸುದೀರ್ಘ 'ಭಾರತ್ ಜೋಡೋ' ಯಾತ್ರೆ ಕೈಗೊಂಡಿದ್ದಾರೆ. ಈ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ದೇಶದ ಹಲವಾರು ಭಾಗಗಳಲ್ಲಿ ಜನರೊಂದಿಗೆ ಸಂವಾದ ನಡೆಸುತ್ತಿದ್ದು ಮತ್ತು ರ್‍ಯಾಲಿಗಳನ್ನು ನಡೆಸುತ್ತಾರೆ.

ಭಾರತ್ ಜೋಡೋ ಯಾತ್ರೆಯ ಭಾಗವಾಗಿ ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ಘಟನೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹಂಚಿಕೊಂಡಿದ್ದಾರೆ. ಸಂವಾದದ ವೇಳೆ, ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಿರುವುದರಿಂದ ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ.

Bharat Jodo yatra: Will Rahul Gandhi marry a Tamil girl

ಇಂದು ಮಧ್ಯಾಹ್ನ ಮಾರ್ತಾಂಡಮ್‌ನಲ್ಲಿ ನರೇಗಾ ಮಹಿಳಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಸಂವಾದದ ಸಂದರ್ಭದಲ್ಲಿ ಒಬ್ಬ ಮಹಿಳೆ ರಾಹುಲ್‌ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಿದ್ದಾರೆ. ಹಾಗಾಗಿ ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ರಾಹುಲ್‌ ಗಾಂಧಿ ಹೆಚ್ಚು ನಾಚಿಕೆ ಹೊಂದಿದವರಂತೆ ಕಾಣುವಂತೆ ಫೋಟೋ ಅದನ್ನು ತೋರಿಸುತ್ತದೆ ಎಂದು ಜೈರಾಮ್‌ ರಮೇಶ್ ಟ್ವೀಟ್ ಮಾಡಿದ್ದಾರೆ.

Bharat Jodo yatra: Will Rahul Gandhi marry a Tamil girl

ಕಾಂಗ್ರೆಸ್‌ನ 'ಭಾರತ್ ಜೋಡೋ' ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಮತ್ತು ಐದು ತಿಂಗಳ ಅವಧಿಯಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಮತ್ತು ಕಾಶ್ಮೀರದವರೆಗೆ 3,750 ಕಿ.ಮೀ. ಕ್ರಮಿಸಲಿದೆ. 22 ಪ್ರಮುಖ ನಗರಗಳಲ್ಲಿ ಮೆಗಾ ರ್‍ಯಾಲಿಗಳು ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+