ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನಲ್ಲಿ ಬಿಜೆಪಿಗೆ 20 ಕ್ಷೇತ್ರ ಬಿಟ್ಟುಕೊಟ್ಟ ಎಐಎಡಿಎಂಕೆ

|
Google Oneindia Kannada News

ಚೆನ್ನೈ, ಮಾರ್ಚ್.06: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 234 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷಕ್ಕೆ 20 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಎಐಎಡಿಎಂಕೆ ಪಕ್ಷವು ಶುಕ್ರವಾರ ರಾತ್ರಿ ಬಹಿರಂಗಪಡಿಸಿದೆ. 2021ನೇ ಸಾಲಿನ ಚುನಾವಣೆಯಲ್ಲಿ ಕನ್ಯಾಕುಮಾರಿ ಸೇರಿದಂತೆ 20 ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ತಮಿಳುನಾಡು ಆಂತರಿಕ ವ್ಯವಹಾರಗಳ ಉಸ್ತುವಾರಿ ಸಿ ಟಿ ರವಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಎಲ್ ಮುರುಗನ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಎಐಎಡಿಎಂಕೆ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಎಡಪ್ಪಾಡಿಯಿಂದ ಸಿಎಂ ಸ್ಪರ್ಧೆ
ಕಳೆದ ಫೆಬ್ರವರಿ.28ರಿಂದಲೂ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗುತ್ತಿತ್ತು. ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಗೆ ಬೇಡಿಕೆಯಿಟ್ಟಿತ್ತು.

BJP-AIADMK Seat Sharing: Saffron Party Allotted 20 Seats By AIADMK In Tamil nadu Election

ಬಿಜೆಪಿ-ಎಐಎಡಿಎಂಕೆ ನಡುವೆ ಒಪ್ಪಂದ:
ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಶನಿವಾರ ಒಪ್ಪಂದದ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಉಸ್ತುವಾರಿ ಸಿ ಟಿ ರವಿ ಸ್ಪಷ್ಟಪಡಿಸಿದ್ದಾರೆ. ಶನಿವಾರ ಒಟ್ಟು ಕ್ಷೇತ್ರಗಳು ಮತ್ತು ಯಾವ ಯಾವ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟು ಕೊಡಲಾಗುತ್ತದೆ ಎನ್ನುವುದರ ಬಗ್ಗೆ ಸ್ಪಷ್ಟವಾಗಲಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ಬಗ್ಗೆ ಬಿಜೆಪಿಯು ಅಧಿಕೃತವಾಗಿ ಘೋಷಣೆ ಮಾಡಲಿದೆ.
ಎಐಎಡಿಎಂಕೆ 6 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ:
ಚೆನ್ನೈನಲ್ಲಿ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಡಿಸಿಎಂ ಪನ್ನೀರ್ ಸೆಲ್ವಂ ಸೇರಿದಂತೆ ಎಐಡಿಎಂಕೆ ಪಕ್ಷದ ಆರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ರಾಜ್ಯದ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ ಪಿಎಂಕೆ ಮತ್ತು ಬಿಜೆಪಿಗೆ 43 ಕ್ಷೇತ್ರಗಳನ್ನು ಬಿಟ್ಟು ಕೊಡಲಾಗಿದೆ. 170 ಕ್ಷೇತ್ರಗಳಲ್ಲಿ ಎಐಡಿಎಂಕೆ ಸ್ಪರ್ಧಿಸುವುದಕ್ಕೆ ಪ್ಲ್ಯಾನ್ ರೂಪಿಸುತ್ತಿದೆ. ಏಕೆಂದರೆ ಮತ್ತೊಂದು ಮಿತ್ರಪಕ್ಷ ಡಿಎಂಡಿಕೆ 25 ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ತಮಿಳುನಾಡು ವಿಧಾನಸಭೆ ಚುನಾವಣೆ:
ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಒಂದೇ ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಘೋಷಿಸಿದೆ. ಏಪ್ರಿಲ್.06ರಂದು ಒಂದು ಹಂತದಲ್ಲಿ ಮತದಾನ ನಡೆಯಲಿದ್ದು, ಮೇ.2ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

English summary
BJP-AIADMK Seat Sharing: Saffron Party Allotted 20 Seats By AIADMK Party In Tamil nadu Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X