ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರುತಿ ಹಾಸನ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

|
Google Oneindia Kannada News

ಚೆನ್ನೈ, ಏಪ್ರಿಲ್ 7: ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಮುಖ್ಯಸ್ಥ ಕಮಲ ಹಾಸನ್ ಮಗಳು ಶ್ರುತಿ ಹಾಸನ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಕಮಲ ಹಾಸನ್ ಸ್ಪರ್ಧಿಸಿರುವ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬೂತ್ ಒಂದಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಶ್ರುತಿ ಹಾಸನ್ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಮಕ್ಕಳಾದ ಶ್ರುತಿ ಮತ್ತು ಅಕ್ಷರಾ ಜತೆಗೆ ಚೆನ್ನೈನಲ್ಲಿ ಮತ ಚಲಾಯಿಸಿದ ಬಳಿಕ ಕಮಲ ಹಾಸನ್ ನೇರವಾಗಿ ತಾವು ಚುನಾವಣೆಗೆ ಸ್ಪರ್ಧಿಸಿರುವ ಕೊಯಮತ್ತೂರು ದಕ್ಷಿಣ ಕ್ಷೇತ್ರಕ್ಕೆ ತೆರಳಿದ್ದರು. ಮತದಾನದ ಪ್ರಮಾಣದ ವಿವರ ಪಡೆಯಲು ಅಲ್ಲಿನ ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ತಮಿಳುನಾಡು ಚುನಾವಣೆಯಲ್ಲಿ ಗೆದ್ದರೆ ಹಣ ಹಂಚಿಕೆ ಮಾಡುವುದಾಗಿ ಭರವಸೆ ನೀಡುತ್ತಿದೆ ಎಂದು ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಮತಗಟ್ಟೆಯಲ್ಲಿ ಕಮಲ ಹಾಸನ್‌ರನ್ನು ಮುತ್ತಿಕೊಂಡ ಜನರುಮತಗಟ್ಟೆಯಲ್ಲಿ ಕಮಲ ಹಾಸನ್‌ರನ್ನು ಮುತ್ತಿಕೊಂಡ ಜನರು

ಕಮಲ ಹಾಸನ್ ಅವರೊಂದಿಗೆ ಮತಗಟ್ಟೆಗಳಿಗೆ ತೆರಳಿದ್ದ ಶ್ರುತಿ ಹಾಸನ್, ಅತಿಕ್ರಮವಾಗಿ ಒಳಗೆ ಪ್ರವೇಶಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೊಯಮತ್ತೂರು ಜಿಲ್ಲಾ ಚುನಾವಣಾ ಅಧಿಕಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ನಂದಕುಮಾರ್ ಅವರು ಪತ್ರ ಬರೆದಿದ್ದಾರೆ.

 BJP Complaint To Election Commission Against Kamal Haasans Daughter Shruti

ಬೂತ್ ಏಜೆಂಟ್‌ಗಳನ್ನು ಹೊರತುಪಡಿಸಿ ಬೇರೆ ಯಾರೂ ಮತಗಟ್ಟೆ ಪ್ರವೇಶಿಸಲು ಅವಕಾಶವಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

English summary
Tamil Nadu BJP files complaint to Election Commission against MNM chief Kamal Haasan's daughter Shruti Haasan for trespassing into polling booth.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X