• search
  • Live TV
ಚೆನ್ನೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking:ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಇದ್ದ ಕಾರು ಅಪಘಾತ

|

ಚೆನ್ನೈ, ನವೆಂಬರ್ 18: ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಇದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮಿಳುನಾಡಿನ ಮೆಲ್ಮರುವಾತ್ತೂರ್ ನಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದ ಟ್ಯಾಂಕರ್ ಖುಷ್ಬೂ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಖುಷ್ಬೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ನಮ್ಮ ಕಾರು ಸರಿಯಾದ ಮಾರ್ಗದಲ್ಲೇ ಚಲಿಸುತ್ತಿತ್ತು, ಕಂಟೈನರ್ ಎಲ್ಲಿಂದಲೋ ಬಂದು ನನ್ನ ಕಾರಿಗೆ ಗುದ್ದಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಚಾಲಕನನ್ನು ಪ್ರಶ್ನೆ ಮಾಡಲಾಗುತ್ತಿದೆ ಎಂದು ಖುಷ್ಬೂ ಸುಂದರ್ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

English summary
BJP leader Khushbu Sundar met with an accident near Melmaruvathur when a tanker rammed into her vehicle. She escaped unhurt. Police investigation is underway.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X